Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಪುತ್ತೂರು: ಕಳೆದ 6 ತಿಂಗಳ ಹಿಂದೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುರ ಎಂಬಲ್ಲಿ ಬಸ್- ಕಾರು ನಡುವೆ ಡಿಕ್ಕಿ ಸಂಭವಿಸಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೆದಿಲ ಗ್ರಾಮದ ಅಂಡೆಪುಣಿ ನಿವಾಸಿ ಈಶ್ವರ ಭಟ್ (70) ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ (ನ.03) ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಇದೇ ಘಟನೆಯಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಈಶ್ವರ ಭಟ್ ಅವರ ಪುತ್ರಿ ಅಪೂರ್ವ ಭಟ್ (32) ಅವರು ಕೆಲ ದಿನಗಳ ಹಿಂದಷ್ಟೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದರು. ಇದೀಗ ತಂದೆಯೂ ನಿಧನರಾಗಿದ್ದಾರೆ. 130 ದಿನಗಳಿಗೂ ಅಧಿಕ ಕಾಲ ಆಸ್ಪತ್ರೆಯಲ್ಲಿ ಕೋಮಾ ಸ್ಥಿತಿಯಲ್ಲಿ ಚಿಕಿತ್ಸೆ ಪಡೆದ ಅಪೂರ್ವ ಅವರ ಆರೋಗ್ಯ ಸ್ಥಿತಿ ಕುರಿತು ಅವರ ಪತಿ ಆಶೀಶ್ ಸಾರಡ್ಕ ಅವರು ಜಾಲತಾಣಗಳಲ್ಲಿ ನಿರಂತರವಾಗಿ ಮಾಹಿತಿ ಹಂಚಿಕೊಂಡಿದ್ದು, ಸಾವಿರಾರು ಮಂದಿ ಅವರ ಆರೋಗ್ಯ ಚೇತರಿಕೆಗೆ ಪ್ರಾರ್ಥಿಸಿದ್ದರು. ಈ ವಿಚಾರ ರಾಜ್ಯಾದ್ಯಂತ ಸುದ್ದಿಯಾಗಿತ್ತು.
ಅದೇ ಅಪಘಾತದಲ್ಲಿ ಗಾಯಗೊಂಡಿದ್ದು ಈಶ್ವರ ಭಟ್ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಅವರನ್ನು ಅಲ್ಲಿಂದ ಸ್ಥಳಾಂತರಗೊಳಿಸಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.