newsics.com
ಧಾರವಾಡ: ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ವಿಚಾರವಾಗಿ ರಾಜ್ಯ ಸರ್ಕಾರದ ಮೇಲ್ಮನವಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ವಿಚಾರಕ್ಕೆ ಸಂಬಂಧಪಟ್ಟಂತೆ ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ತೆರವು ಕೋರಿದ್ದ ಅರ್ಜಿಯ ಕುರಿತಂತೆ ಧಾರವಾಡ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆದಿದ್ದು, ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಏಕ ಸದಸ್ಯ ಪೀಠ ತಡೆಯಾಜ್ಞೆ ನೀಡಿತ್ತು.
ಇದಕ್ಕೆ ತಡೆ ನೀಡಲು ವಿಭಾಗೀಯ ಪೀಠ ನಿರಾಕರಿಸಿದೆ. ಅಕ್ಟೋಬರ್ 28ರಂದು ಹೈಕೋರ್ಟ್ ಏಕ ಸದಸ್ಯ ಪೀಠ ತಡೆಯಾಜ್ಞೆ ನೀಡಿತ್ತು. ತಡೆಯಾಜ್ಞೆಯನ್ನು ಪ್ರಶ್ನಿಸಿ ರಾಜ್ಯ ಸರ್ಕಾರದ ಪರ ವಕೀಲರು ಅರ್ಜಿ ಸಲ್ಲಿಸಿದ್ದರು.
ನವೆಂಬರ್ 4ರಂದು ನಡೆದಿದ್ದ ಅರ್ಜಿಯ ವಿಚಾರಣೆ ವಾದ ಪ್ರತಿವಾದ ಆಲಿಸಿ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಗುರುವಾರ (ನ.6) ಹೈಕೋರ್ಟ್ ವಿಭಾಗೀಯ ಪೀಠ ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ವಿಭಾಗೀಯ ಪೀಠ ನಕಾರ ವ್ಯಕ್ತಪಡಿಸಿದೆ. ತಡೆ ತೆರವಿಗೆ ಏಕಸದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಲು ಸರ್ಕಾರಕ್ಕೆ ಸೂಚಿಸಿ, ರಾಜ್ಯ ಸರ್ಕಾರದ ಮೇಲ್ಮನವಿಯನ್ನು ವಜಾಗೊಳಿಸಿತು.