Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಿಚ್ಛೇದನ ಕೇಳಿದ ಪತ್ನಿಯ ಖಾಸಗಿ ಫೋಟೋಗಳನ್ನು ಪೋಸ್ಟ್ ಮಾಡಿದ ಪತಿ
ಕರ್ನಾಟಕ

ವಿಚ್ಛೇದನ ಕೇಳಿದ ಪತ್ನಿಯ ಖಾಸಗಿ ಫೋಟೋಗಳನ್ನು ಪೋಸ್ಟ್ ಮಾಡಿದ ಪತಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTub

newsics.com

ಕೌಟುಂಬಿಕ ದೌರ್ಜನ್ಯದಿಂದ ಬೇಸತ್ತು ವಿಚ್ಛೇದನ ಕೇಳಿದ ಪತ್ನಿಯ ಖಾಸಗಿ ಫೋಟೋಗಳನ್ನು ಪತಿಯೇ ಸಾಮಾಜಿಕ ಮಾಧ್ಯಮಗಳಲ್ಲಿ ಅಪ್‌ಲೋಡ್ ಮಾಡಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸದ್ಯ ಆರೋಪಿ ಗೋವಿಂದರಾಜು (27) ಎಂಬಾತನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.ಆರೋಪಿ ಗೋವಿಂದರಾಜು ಹಾಗೂ ಮಹಿಳೆ ಬೆಂಗಳೂರಿನ ಮಾಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದಾಗ ಪರಸ್ಪರ ಪರಿಚಯವಾಗಿದ್ದರು. ನಂತರ 2024ರಲ್ಲಿ ವಿವಾಹವಾಗಿದ್ದರು. ನಂತರದಲ್ಲಿ ಆನ್​ಲೈನ್ ಬೆಟ್ಟಿಂಗ್ ಹಾಗೂ ಕುಡಿತದ ದಾಸನಾಗಿದ್ದ ಗೋವಿಂದರಾಜು ಅದರಲ್ಲೇ ಹಣ ಕಳೆದುಕೊಳ್ಳುತ್ತಿದ್ದ. ಅಲ್ಲದೆ, ಪತ್ನಿ ದುಡಿದು ತಂದ ಹಣವನ್ನೂ ಆನ್​ಲೈನ್ ಬೆಟ್ಟಿಂಗ್, ಕುಡಿತಕ್ಕೆ ಬಳಸುತ್ತಿದ್ದ. ಇದರಿಂದಾಗಿ ದಂಪತಿ ಮಧ್ಯೆ ನಿತ್ಯ ಜಗಳವಾಗುತ್ತಿತ್ತು.

ಕುಡಿತದ ಚಟದಿಂದ ಹಣ ಕಳೆದುಕೊಂಡು ಮನೆಗೆ ಬರುವ ಗೋವಿಂದರಾಜು ನಿತ್ಯ ಹೆಂಡತಿ ಮೇಲೆ ಹಲ್ಲೆ ಮಾಡುತ್ತಿದ್ದ. ಗಂಡನ ದೌರ್ಜನ್ಯದಿಂದ ಬೇಸತ್ತ ಮಹಿಳೆ ಬೆಂಗಳೂರು ತೊರೆದು ಆಂಧ್ರ ಪ್ರದೇಶದಲ್ಲಿರುವ ತವರು ಮನೆಗೆ ತೆರಳಿದ್ದರು.

ಪತಿಯ ಕಾಟದಿಂದ ಬೇಸತ್ತು ತವರಿಗೆ ಹೋದ ಮಹಿಳೆ ಗೋವಿಂದರಾಜು ಬಳಿ ವಿಚ್ಛೇದನ ಕೇಳಿದ್ದಳು. ಇದರಿಂದಾಗಿ ಆಕೆಗೆ ಅಲ್ಲಿಯೂ ನೆಮ್ಮದಿ ಇರಲ್ಲದಂತಾಗಿತ್ತು. ವಿಚ್ಛೇದನ ಕೇಳಿದ್ದರಿಂದ ಸಿಟ್ಟಾಗಿ ಪತ್ನಿಗೆ ಕರೆ ಮಾಡಿದ್ದ ಗೋವಿಂದರಾಜು, ಖಾಸಗಿ ಫೋಟೋಗಳು ಮತ್ತು ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದ.

ಪೇಯಿಂಗ್ ಗೆಸ್ಟ್​ಗೂ ತೆರಳಿ ಮಹಿಳೆಗೆ ಕಾಟ ಕೊಡುತ್ತಿದ್ದ ಆರೋಪಿ, ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಕೊಲೆ ಮಾಡುವುದಾಗಿಯೂ ಸಂತ್ರಸ್ತೆಗೆ ಬೆದರಿಕೆ ಹಾಕಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

https://www.newsics.com/2025/11/06/bomb-threat-message-sent-via-email-to-several-schools-in-bengaluru-female-techie-arrested/

TAGGED:#husband #wife #personlphoto #socialmedia #banglore #arrest #police #case
Share This Article
Facebook Twitter Copy Link Print
Previous Article ಬೆಂಗಳೂರಿನ ಹಲವು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ : ಮಹಿಳಾ ಟೆಕ್ಕಿ ಅರೆಸ್ಟ್.!
Next Article RCB ಮಹಿಳಾ ತಂಡದ ಮುಖ್ಯ ಕೋಚ್ ಆಗಿ ಮಾಲೋಲನ್ ರಂಗರಾಜನ್ ನೇಮಕ

Popular Posts

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read
ಕರ್ನಾಟಕಪ್ರಮುಖ

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read
ಕರ್ನಾಟಕಪ್ರಮುಖ

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read
ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?