Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಳಗಾವಿ: ಬೆಲೆ ನಿಗದಿಗೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆ , ಹೋರಾಟದ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಒಂದು ವಾರದಿಂದಲೂ ನಡೆಯುತ್ತಿರುವ ಪ್ರತಿಭಟನೆ ಇಂದು ಉಗ್ರ ರೂಪ ತಾಳುವ ಸಾಧ್ಯತೆ ಇದೆ. ಪ್ರತೀ ಟನ್ ಕಬ್ಬಿಗೆ 3500 ರೂಪಾಯಿ ಕೊಡಲೇ ಬೇಕು ಎಂದು ಪಟ್ಟು ಹಿಡಿದಿರೋ ಕಬ್ಬು ಬೆಳೆಗಾರರು, ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಗುರ್ಲಾಪುರದಲ್ಲಿ ಒಂದು ವಾರದಿಂದಲೂ ಪ್ರತಿಭಟನೆ ನಡೆಸುತ್ತಿದ್ದಾರೆ. ಅದೇ ಹೋರಾಟ ಇಂದು 8 ನೇ ದಿನಕ್ಕೆ ಕಾಲಿಟ್ಟಿದೆ. .
ಕಬ್ಬು ಬೆಳೆಗಾರರ ಹೋರಾಟಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಾಥ್ ನೀಡಿದ್ದ ಬೆನ್ನಲ್ಲೇ ಸರ್ಕಾರ ರೈತರೊಂದಿಗೆ ಮಾತುಕತೆಗೆ ಮುಂದಾಗಿತ್ತು. ಈ ಹಿನ್ನೆಲೆಯಲ್ಲಿ ಸಚಿವ ಹೆಚ್.ಕೆ.ಪಾಟೀಲ್ ರೈತ ಮುಖಂಡರ ಜೊತೆ ಹೋರಾಟಗಾರರ ಜೊತೆ ಮಾತುಕತೆ ನಡೆಸಿ ಮನವೊಲಿಸುವ ಯತ್ನ ನಡೆಸಿದರು. ಆದರೆ ಸಚಿವರು ನಡೆಸಿದ ಸಂಧಾನ ಸಭೆ ವಿಫಲವಾಗಿದೆ. ಇಂಫದೂ ಕೂಡ ಕಬ್ಬು ಬೆಳೆಗಾರರು ಹೋರಾಟ ನಡೆಸುತ್ತಿದ್ದಾರೆ.
ಕಬ್ಬು ಬೆಳೆಗಾರರ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿಳಿಸಿ ಮನವರಿಕೆ ಮಾಡಿ. ನಾಳೆ ಸಂಜೆಯೊಳಗೆ ನಿರ್ಧಾರ ತಿಳಿಸುವಂತೆ ರೈತ ಮುಖಂಡರು ಗಡುವು ನೀಡಿದ್ದಾರೆ. ಬೇಡಿಕೆ ಈಡೇರಿಸಿದರೆ ಪ್ರತಿಭಟನೆ ಹಿಂಪಡೆಯುತ್ತೇವೆ. ಇಲ್ಲವಾದಲ್ಲಿ ಹೋರಾಟ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.
https://www.newsics.com/2025/11/06/kumbh-mela-beauty-monalisa-makes-her-telugu-film-debut/