Subscribe ನ್ಯೂಸಿಕ್ಸ್ ಕನ್ನಡ NewsicsKannada/YouTub
newsics.com
ಬೆಂಗಳೂರು : ಕಬ್ಬು ಬೆಳೆಗಾರರ ಪ್ರತಿಭಟನೆ ಶುರುವಾಗಿ ಒಂದು ವಾರ ಉರುಳಿ, ಎರಡನೇ ವಾರಕ್ಕೆ ಕಾಲಿಟ್ಟಿದೆ. ಅದರಲ್ಲೂ ನಾಳೆ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ಕರೆದಿದ್ದು, ಆ ಸಭೆ ಮೇಲೆಯೇ ಎಲ್ಲರ ಚಿತ್ತ ನೆಟ್ಟಿದೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಕಬ್ಬು ಬೆಳೆಗಾರರ ಸಮಸ್ಯೆ ಬಗ್ಗೆ ಚರ್ಚಿಸಲು ತುರ್ತು ಅವಕಾಶ ಕೋರಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.
ಪ್ರತೀ ಟನ್ ಕಬ್ಬಿಗೆ 3500 ರೂ. ದರ ನಿಗದಿ ಮಾಡಬೇಕು ಅಂತಾ ಪಟ್ಟು ಹಿಡಿದಿರುವ ರೈತರ ಹೋರಾಟ ತೀವ್ರಗೊಂಡಿದೆ. ದಿನಕ್ಕೊಬ್ಬರು ಸಚಿವರು ರೈತರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ. ಆದರೆ ಸಮಸ್ಯೆ ಮಾತ್ರ ಬಗೆಹರಿಯುತ್ತಿಲ್ಲ.
ಹೀಗಾಗಿ ಈ ಕಬ್ಬಿನ ಕಿಚ್ಚು ಆರಿಸಲು ಸ್ವತಃ ಸಿಎಂ ಸಿದ್ದರಾಮಯ್ಯ ಪ್ರವೇಶಿಸಿದ್ದಾರೆ. ತುರ್ತು ಸುದ್ದಿಗೋಷ್ಠಿಯಲ್ಲಿ ಪ್ರಧಾನಿ ಮೋದಿಗೆ ಪತ್ರ ಬರೆಯುವುದಾಗಿ ಹೇಳಿದ್ದ ಸಿಎಂ, ಅದರಂತೆ ಇದೀಗ ಪತ್ರ ಬರೆದಿದ್ದಾರೆ.