Subscribe ನ್ಯೂಸಿಕ್ಸ್ ಕನ್ನಡ NewsicsKannada/YouTub
newsics.com
ಚಾಮರಾಜನಗರ : ನಾಗರಹೊಳೆ ಮತ್ತು ಬಂಡೀಪುರ ಸಫಾರಿ ಹಾಗೂ ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಚಾರಣವನ್ನು ಇಂದಿನಿಂದಲೇ ಬಂದ್ ಮಾಡಿ ಹುಲಿ ಸೆರೆ ಕಾರ್ಯಾಚರಣೆಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.
ಹೆಗ್ಗೋಡಿಲು ಗ್ರಾಮದ ಬಳಿ ಹುಲಿ ದಾಳಿಗೆ ರೈತ ಬಲಿಯಾದ ಹಿನ್ನೆಲೆ ಹುಲಿ ಸೆರೆ ಹಿಡಿಯಲು ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.
ಮುಂದಿನ ಆದೇಶದವರೆಗೆ ಇಂದಿನಿಂದಲೇ ನಾಗರಹೊಳೆ ಮತ್ತು ಬಂಡೀಪುರದಲ್ಲಿ ಸಫಾರಿ ಬಂದ್ ಮಾಡಲು ಮತ್ತು ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಟ್ರಕ್ಕಿಂಗ್ ಸ್ಥಗಿತಗೊಳಿಸಲು ಹಾಗೂ ಬಂಡೀಪುರ, ನಾಗರಹೊಳೆ ಸಫಾರಿಯ ಕಾರ್ಯದಲ್ಲಿ ನಿಯೋಜನೆಗೊಂಡಿರುವ ಎಲ್ಲ ಅಧಿಕಾರಿಗಳು ಮತ್ತು ವಾಹನ ಚಾಲಕರ ಸಹಿತ ಎಲ್ಲ ಸಿಬ್ಬಂದಿ ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜನೆ ಮಾಡಲು ಸೂಚನೆ ನೀಡಿದ್ದಾರೆ.