Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
‘ಸೂಪರ್ ಸ್ಟಾರ್’ ರಜನಿಕಾಂತ್ ಅವರ ಅಣ್ಣ ಸತ್ಯನಾರಾಯಣ ರಾವ್ ಗಾಯಕ್ವಾಡ್ ಅವರಿಗೆ ಹೃದಯಾಘಾತವಾಗಿದ್ದು, ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸತ್ಯನಾರಾಯಣ್ ಅವರನ್ನು ಆಸ್ಪತ್ರೆಗೆ ಸೇರಿಸಲು ಖುದ್ದು ರಜನಿಕಾಂತ್ ಅವರೇ ಬೆಂಗಳೂರಿಗೆ ಆಗಮಿಸಿದ್ದಾರೆ. ಸತ್ಯನಾರಾಯಣ ರಾವ್ ಗಾಯಕ್ವಾಡ್ ಅವರಿಗೆ ಈಗ 84 ವರ್ಷ ವಯಸ್ಸು. ಬೆಂಗಳೂರಿನ ಹೊಸಕೆರೆ ಹಳ್ಳಿಯ ನಂದಿ ಕಾರಿಡಾರ್ ನಿವಾಸಿಯಾಗಿರುವ ಸತ್ಯನಾರಾಯಣ ರಾವ್ ಅವರನ್ನು ಎಲೆಕ್ಟ್ರಾನಿಕ್ ಸಿಟಿಯ ನಾರಾಯಣ ಅವರಿಗೆ ಹೃದಯಾಲಯದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸತ್ಯನಾರಾಯಣ ರಾವ್ ಅವರಿಗೆ ಹೃದಯಾಘಾತವಾಗಿರುವುದರಿಂದ ರಜನಿಕಾಂತ್ ಅವರ ಕುಟುಂಬದಲ್ಲಿ ಆತಂಕ ಮೂಡಿದೆ.
ಅಣ್ಣನ ಅನಾರೋಗ್ಯದ ವಿಷಯ ತಿಳಿಯುತ್ತಿದ್ದಂತೆಯೇ ರಜನಿಕಾಂತ್ ಅವರು ಶುಕ್ರವಾರ (ನ.7) ಬೆಂಗಳೂರಿಗೆ ಆಗಮಿಸಿದ್ದಾರೆ. ಅಣ್ಣನನ್ನು ಅವರೇ ಆಸ್ಪತ್ರೆಗೆ ಸೇರಿಸಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ತೀವ್ರ ನಿಗಾ ಘಟಕದಲ್ಲಿ ಸತ್ಯನಾರಾಯಣ ರಾವ್ ಗಾಯಕ್ವಾಡ್ ಅವರಿಗೆ ಚಿಕಿತ್ಸೆ ಮುಂದುವರಿದಿದೆ.