Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸತತ ಎರಡನೇ ಬಾರಿಗೆ ಗೋವಾದಲ್ಲಿ ನಡೆದ ಐರನ್‌ಮ್ಯಾನ್ 70.3 ಓಟವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ತಮ್ಮ ದೈಹಿಕ ಸಾಮರ್ಥ್ಯ ಮತ್ತು ಶಿಸ್ತಿಗೆ ಮಾದರಿಯಾಗಿದ್ದಾರೆ.
ಈ ವರ್ಷದ ಐರನ್ ಮ್ಯಾನ್ ಓಟದಲ್ಲಿ ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಸಹ ಭಾಗವಹಿಸಿದ್ದು ಮತ್ತೊಂದು ವಿಶೇಷ.
ಸಂಸದ ತೇಜಸ್ವಿ ಸೂರ್ಯ ಸ್ಪರ್ಧೆಯ ಮೂರು ಕಠಿಣ ಹಂತಗಳಾದ 1.9 ಕಿ.ಮೀ ಈಜು, 90 ಕಿ.ಮೀ ಸೈಕ್ಲಿಂಗ್ ಮತ್ತು 21.1 ಕಿ.ಮೀ ಓಟವನ್ನು 7 ಗಂಟೆ 49 ನಿಮಿಷಗಳಲ್ಲಿ ಪೂರ್ಣಗೊಳಿಸಿದ್ದಾರೆ. ಇವುಗಳಲ್ಲಿ ಈಜಲು ಸುಮಾರು 44 ನಿಮಿಷ, ಸೈಕ್ಲಿಂಗ್‌ಗೆ 3 ಗಂಟೆ 47 ನಿಮಿಷ ಮತ್ತು ಓಟಕ್ಕೆ 2 ಗಂಟೆ 54 ನಿಮಿಷ ತೆಗೆದುಕೊಂಡಿದ್ದಾರೆ. ಮತ್ತೊಂದೆಡೆ ಅಣ್ಣಾಮಲೈ ಅವರು ಈ ಓಟವನ್ನು 8 ಗಂಟೆ 13 ನಿಮಿಷಗಳಲ್ಲಿ ಪೂರ್ಣಗೊಳಿಸಿದರು.