Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ದೆಹಲಿ ಕೆಂಪುಕೋಟೆ ಬಳಿ ಕಾರು ಸ್ಫೋಟಗೊಂಡು ಕೆಲವರು ಮೃತಪಟ್ಟ ಘಟನೆ ನಡೆದಿದೆ. ಮೇಲ್ನೋಟಕ್ಕೆ ಭಯೋಕ್ಪಾದ ಕೃತ್ಯ ಎಂದು ಶಂಕಿಸಲಾಗಿದೆ. ಮೆಟ್ರೋ ನಿಲ್ದಾಣದ ಬಳಿ ಪಾರ್ಕ್ ಮಾಡಿದ್ದ ಕಾರು ಸ್ಫೋಟಗೊಂಡಿದೆ. ಕೆಲವೇ ಕ್ಷಣದಲ್ಲಿ ಪಕ್ಕದಲ್ಲೇ ಇದ್ದ ಮತ್ತೊಂದು ಕಾರು ಸ್ಫೋಟಗೊಂಡಿದೆ.
ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಸಂಭವಿಸಿದ ಕಾರು ಸ್ಫೋಟವು ವ್ಯಾಪಕ ಭೀತಿಯನ್ನುಂಟುಮಾಡಿದೆ. ಸ್ಫೋಟದ ಪರಿಣಾಮವಾಗಿ ಹತ್ತಿರದ ಮೂರು ವಾಹನಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಸೋಮವಾರ ಸಂಜೆ ದೆಹಲಿಯ ಹೆಚ್ಚಿನ ಭದ್ರತಾ ವಲಯವಾದ ಕೆಂಪು ಕೋಟೆಯ ಬಳಿ ಕಾರಿನಲ್ಲಿ ಸ್ಫೋಟ ಸಂಭವಿಸಿದ ವರದಿಯಾಗಿದ್ದು, ಆ ಪ್ರದೇಶದಲ್ಲಿ ಭೀತಿ ಉಂಟಾಗಿದೆ.