Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು: ದೆಹಲಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ ಪರಿಣಾಮ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶ ಡಾ. ಎಂಎ ಸಲೀಂ ಆದೇಶಿಸಿದ್ದಾರೆ.
ಬೆಂಗಳೂರಿನಲ್ಲಿ ಕೆಆರ್ ಮಾರುಕಟ್ಟೆ, ಮೆಜೆಸ್ಟಿಕ್, ಸಿನಿಮಾ ಮಂದಿರಗಳು, ಮಾಲ್ ಗಳು, ದೇವಾಲಯಗಳು ಸೇರಿದಂತೆ ಎಲ್ಲಾ ಜನನಿಬಿಡ ಜಾಗಗಳಲ್ಲಿ ತೀವ್ರ ತಪಾಸಣೆ ನಡೆಸುವಂತೆ ಅವರು ಪೊಲೀಸ್ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
ಅಲ್ಲದೆ, ಇಂದಿನಿಂದಲೇ ರಾತ್ರಿ ಗಸ್ತುಗಳನ್ನು ಜಾಸ್ತಿ ಮಾಡುವಂತೆ ಅವರು ಆದೇಶಿಸಿದ್ದಾರೆ. ಜೊತೆಗೆ, ಬೆಂಗಳೂರಿನ ಎಲ್ಲಾ ಲಾಡ್ಜ್ ಗಳಿಗೆ ಭೇಟಿ ನೀಡಿ, ಅಲ್ಲಿ ಉಳಿದುಕೊಂಡಿರುವವರ ಬಗ್ಗೆ ಮಾಹಿತಿ ಪಡೆಯುವಂತೆ ಸೂಚಿಸಿದ್ದಾರೆ. ಏನಾದರೂ ಅನುಮಾನಾಸ್ಪದ ವ್ಯಕ್ತಿಗಳು ಕಂಡಬಂದರೆ ಅವರನ್ನು ವಿಚಾರಣೆಗೊಳಪಡಿಸಬೇಕು ಎಂದು ತಿಳಿಸಿದ್ದಾರೆ.
ವಿಶೇಷವಾಗಿ, ಮಲ್ಲೇಶ್ವರಂನಲ್ಲಿ ನಡೆಯುತ್ತಿರುವ ಕಡಲೇಕಾಯಿ ಪರಿಷೆ ಹಾಗೂ ಬಸವನಗುಡಿಯಲ್ಲಿ ನ. 17ರಿಂದ ಆರಂಭವಾಗುವ ಬಸವನಗುಡಿ ಕಡಲೆಕಾಯಿ ಪರಿಷೆಗೂ ಹೆಚ್ಚಿನ ಭದ್ರತೆಯನ್ನು ಒದಗಿಸಲು ಸೂಚಿಸಲಾಗಿದೆ.
ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿರುವ ಹಿನ್ನೆಲೆಯಲ್ಲಿ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಕಟ್ಟೆಚ್ಚರವನ್ನು ಜಾರಿಗೊಳಿಸಲು ಸೂಚಿಸಲಾಗಿದೆ. ಅದರಂತೆ, ಎಲ್ಲಾ ಜಿಲ್ಲೆಗಳಲ್ಲಿನ ಮಾರುಕಟ್ಟೆಗಳು, ಸಿನಿಮಾ ಥಿಯೇಟರ್, ಜಾತ್ರೆ, ಸ್ಥಳೀಯ ಹಬ್ಬಗಳು – ಮೆರವಣಿಗೆಗಳಿಗೆ ವಿಶೇಷ ಭದ್ರತೆ ಕೊಡುವಂತೆ ಆದೇಶಿಸಿದ್ದಾರೆ. ಅಲ್ಲದೆ, ಜಿಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ತಾಲೂಕು ಕೇಂದ್ರಗಳಲ್ಲಿ ಗಸ್ತುಗಳನ್ನು ಹೆಚ್ಚಿಗೆ ಮಾಡಲು ಸೂಚನೆ ನೀಡಲಾಗಿದೆ. ಸೂಕ್ಷ್ಮವಾದ ಪ್ರದೇಶಗಳಲ್ಲಿ ಹೆಚ್ಚುವರಿ ಗಮನ ಹರಿಸುವಂತೆ ಸೂಚಿಸಲಾಗಿದೆ.
ಷೇರ್ ಮಾರ್ಕೆಟ್ ಹೂಡಿಕೆಯ ಸ್ಥಿತಿಗತಿ ತಿಳಿಯಲು ಈ ವ್ಯಕ್ತಿ ಮಾಡಿದ್ದೇನು?