Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ದೆಹಲಿ: ದೆಹಲಿಯ ಕೆಂಪುಕೋಟೆ ಬಳಿ ಭಾರಿ ಸ್ಫೋಟ ನಡೆದ ಹಿನ್ನೆಲೆಯಲ್ಲಿ ಭಾರತದ ಪ್ರಮುಖ ನಗರಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಸ್ಫೋಟದಲ್ಲಿ 9 ಮಂದಿ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದ್ದು, ಗಾಯಾಳುಗಳನ್ನು ಎಲ್‌ಎನ್‌ಜಿಪಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಭೀಕರ ಸ್ಫೋಟದ ನಂತರದ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಕೆಂಪುಕೋಟೆ ಮುಂಭಾಗದ ಲಾಲ್ ಕಿಲಾ ಮೆಟ್ರೋ ನಿಲ್ದಾಣದ ಬಳಿಕ ಸ್ಫೋಟವಾಗಿದೆ. ಸ್ಫೋಟದ ತೀವ್ರತೆಗೆ 10ಕ್ಕೂ ಹೆಚ್ಚು ಕಾರುಗಳು ಧ್ವಂಸವಾಗಿದ್ದು, ಕೆಲವರ ದೇಹಗಳು ಛಿದ್ರ ಛಿದ್ರವಾಗಿರುವುದು ಸ್ಫೋಟದ ತೀವ್ರತೆಗೆ ಸಾಕ್ಷಿಯಾಗಿವೆ. ಸ್ಫೋಟದ ಹಿನ್ನೆಲೆಯಲ್ಲಿ ದೆಹಲಿ ಮಾತ್ರವಲ್ಲದೆ ಮುಂಬೈ, ಹೈದರಾಬಾದ್, ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಇನ್ನು ಘಟನಾ ಸ್ಥಳಕ್ಕೆ ಎನ್‌ಐಎ, ಎನ್‌ಎಸ್‌ಜಿ ತಂಡಗಳು ತೆರಳಿ ಪರಿಶೀಲಿಸುತ್ತಿದ್ದು, ಘಟನೆ ಹಿಂದೆ ಉಗ್ರರ ಕೈವಾಡ ಇದೆಯೇ ಎಂಬ ಆಯಾಮದಲ್ಲಿ ತನಿಖೆ ನಡೆಸುತ್ತಿದ್ದಾರೆ.