Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Tirupati Laddu ತಿರುಪತಿ ಲಡ್ಡುಗೆ ರಾಸಾಯನಿಕ ತುಪ್ಪ ಬಳಕೆ: ಕೆಮಿಕಲ್ ವ್ಯಾಪಾರಿ ಬಂಧನ
ದೇಶಪ್ರಮುಖ

Tirupati Laddu ತಿರುಪತಿ ಲಡ್ಡುಗೆ ರಾಸಾಯನಿಕ ತುಪ್ಪ ಬಳಕೆ: ಕೆಮಿಕಲ್ ವ್ಯಾಪಾರಿ ಬಂಧನ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ತಿರುಮಲ ತಿರುಪತಿ ದೇವಸ್ಥಾನ (TTD) ದಲ್ಲಿ ಲಡ್ಡುಗಾಗಿ ಬಳಕೆ ಮಾಡಲಾಗುವ ತುಪ್ಪ ಕಲಬೆರಕೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ದೆಹಲಿ ಮೂಲದ ರಾಸಾಯನಿಕ ವ್ಯಾಪಾರಿಯನ್ನು ಬಂಧಿಸಿದೆ.

ಅಜಯ್ ಕುಮಾರ್ ಸುಗಂಧ ಬಂಧಿತ ಆರೋಪಿ. ಈತನನ್ನು ಈ ಪ್ರಕರಣದಲ್ಲಿ ಎ-16 ಎಂದು ಹೆಸರಿಸಲಾಗಿದೆ. ಭೋಲೆಬಾಬಾ ಡೈರಿ ನೆಟ್‌ವರ್ಕ್‌ಗೆ ಸಂಬಂಧಿಸಿದ ಕಲಬೆರಕೆ ತುಪ್ಪ ತಯಾರಿಸಲು ಬಳಸುವ ರಾಸಾಯನಿಕಗಳನ್ನು ಪೂರೈಸಿದ ಆರೋಪ ಈತನ ಮೇಲಿದೆ.

ಸೆಪ್ಟೆಂಬರ್ 2024 ರಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ಹಿಂದಿನ ಆಡಳಿತದಲ್ಲಿ ಟಿಟಿಡಿ ಲಡ್ಡುಗಳನ್ನು ಪ್ರಾಣಿಗಳ ಕೊಬ್ಬಿನೊಂದಿಗೆ ಕಲಬೆರಕೆ ಮಾಡಲಾಗಿತ್ತು ಎಂದು ಆರೋಪ ಮಾಡಿದಾಗ ವಿವಾದ ಭುಗಿಲೆದ್ದಿತ್ತು. ನಂತರ ನ್ಯಾಯಾಲಯದ ನಿರ್ದೇಶನದ ಮೇರೆಗೆ ಎಸ್‌ಐಟಿ ರಚಿಸಲಾಯಿತು.

ತನಿಖಾಧಿಕಾರಿಗಳ ಪ್ರಕಾರ, ಅಜಯ್ ಕುಮಾರ್ ಸುಮಾರು ಏಳು ವರ್ಷಗಳ ಕಾಲ ಭೋಲೆಬಾಬಾ ಡೈರಿ ನಿರ್ದೇಶಕರಾದ ಪೋಮಿಲ್ ಜೈನ್ ಮತ್ತು ವಿಪಿನ್ ಜೈನ್ ಅವರಿಗೆ ಪಾಮ್ ಎಣ್ಣೆ ತಯಾರಿಸಲು ಬಳಸುವ ರಾಸಾಯನಿಕಗಳಾದ ಮೊನೊಗ್ಲಿಸರೈಡ್‌ಗಳು, ಅಸಿಟಿಕ್ ಆಮ್ಲ ಮತ್ತು ಎಸ್ಟರ್‌ಗಳನ್ನು ಪೂರೈಸುತ್ತಿದ್ದ ಎಂದು ತಿಳಿದುಬಂದಿದೆ.

ರಾಸಾಯನಿಕ ತುಪ್ಪ:

ದೆಹಲಿಯ ಪ್ರಮುಖ ವಿತರಕರೊಬ್ಬರು ದಕ್ಷಿಣ ಕೊರಿಯಾದಿಂದ ಆಮದು ಮಾಡಿಕೊಂಡ ರಾಸಾಯನಿಕಗಳನ್ನು ಅಜಯ್ ಕುಮಾರ್ ತಮ್ಮ ಕಂಪನಿಯ ಹೆಸರಿನಲ್ಲಿ ಖರೀದಿಸಿ ಡೈರಿಗೆ ಪೂರೈಸಿದ್ದಾರೆ ಎಂದು ಎಸ್‌ಐಟಿ ಕಂಡುಕೊಂಡಿದೆ. ಈ ರಾಸಾಯನಿಕಗಳನ್ನು ಬಳಸಿ ತಯಾರಿಸಿದ ತುಪ್ಪವನ್ನು ತಿರುಮಲ ತಿರುಪತಿ ದೇವಸ್ಥಾನಗಳಿಗೆ (TTD) ವೈಷ್ಣವಿ ಮತ್ತು ಎಆರ್ ಡೈರಿ ಎಂಬ ಬ್ರಾಂಡ್ ಹೆಸರುಗಳಲ್ಲಿ ಪೂರೈಸಲಾಗುತ್ತಿತ್ತು ಎಂದು ವರದಿಯಾಗಿದೆ.

ಲಡ್ಡು ತಯಾರಿಕೆಯಲ್ಲಿ ಬಳಸುವ ತುಪ್ಪದ ಶೇಕಡಾ 90ಕ್ಕಿಂತ ಹೆಚ್ಚು ಪಾಮ್ ಎಣ್ಣೆಯೊಂದಿಗೆ ಬೆರೆಸಲಾಗಿದೆ ಎಂದು ಎಸ್‌ಐಟಿ ಪತ್ತೆ ಮಾಡಿದೆ.

ಭೋಲೆಬಾಬಾ ಡೈರಿ ನಿರ್ದೇಶಕರೊಂದಿಗೆ ಅಜಯ್ ಕುಮಾರ್ ಅವರ ಸಂಬಂಧ ಹೊಂದಿರುವ ರಾಸಾಯನಿಕ ಪೂರೈಕೆ ಮತ್ತು ಹಣಕಾಸು ವಹಿವಾಟುಗಳ ಪುರಾವೆಗಳನ್ನು ಸಂಗ್ರಹಿಸಿರುವುದಾಗಿ ತನಿಖಾಧಿಕಾರಿಗಳು ತಿಳಿಸಿದ್ದಾರೆ.

ಮೂರು ದಿನಗಳ ಹಿಂದೆ ಈತನನ್ನು ದೆಹಲಿಯಲ್ಲಿ ಬಂಧಿಸಿ, ತಿರುಪತಿಗೆ ಎಸ್‌ಐಟಿ ಕಚೇರಿಯಲ್ಲಿ ವಿಚಾರಣೆಗಾಗಿ ಕರೆತರಲಾಯಿತು ಮತ್ತು ನಂತರ ನೆಲ್ಲೂರು ಎಸಿಬಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಅಜಯ್‌ಕುಮಾರ್‌ನನ್ನು ಈ ತಿಂಗಳ 21 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Tamil actor Abhinay passes away ತಮಿಳಿನ ಖ್ಯಾತ ನಟ ಅಭಿನಯ್ ನಿಧನ

Militants arrest ದೇಶದಲ್ಲಿ ಕೆಮಿಕಲ್ ಬಾಂಬ್ ದಾಳಿಗೆ ಸಂಚು: ಮೂವರು ಐಸಿಸ್ ಉಗ್ರರ ಬಂಧನ

TAGGED:Use of chemical ghee for Tirupati Laddu: Chemical dealer arrested
Share This Article
Facebook Twitter Copy Link Print
Previous Article Tamil actor Abhinay passes away ತಮಿಳಿನ ಖ್ಯಾತ ನಟ ಅಭಿನಯ್ ನಿಧನ
Next Article ಪತ್ನಿ ಕಿರುಕುಳಕ್ಕೆ ಜೀವ ಕಳೆದುಕೊಂಡ ಪತಿ

Popular Posts

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

You Might Also Like

ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?