Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಮುಂಬೈ : ಬಾಲಿವುಡ್ ನಟ ಧಮೇಂದ್ರ ನಿಧನ ವಾರ್ತೆ ಸುಳ್ಳು ಎಂದು ಪತ್ನಿ ಹೇಮಮಾಲಿನಿ ಸ್ಪಷ್ಟನೆ ನೀಡಿದ್ದಾರೆ. ಕೆಲವು ಮಾಧ್ಯಮಗಳಲ್ಲಿ ಬಾಲಿವುಡ್ ನಟ ಧರ್ಮೇಂದ್ರ ನಿಧನರಾಗಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಈ ಬೆನ್ನಲ್ಲೇ ಪತ್ನಿ ಹೇಮಮಾಲಿನಿ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.
ಈ ಘಟನೆ ಕ್ಷಮಿಸಲಾಗದು! ಚಿಕಿತ್ಸೆಗೆ ಸ್ಪಂದಿಸುತ್ತಿರುವ ಮತ್ತು ಚೇತರಿಸಿಕೊಳ್ಳುತ್ತಿರುವ ವ್ಯಕ್ತಿಯ ಬಗ್ಗೆ ಜವಾಬ್ದಾರಿಯುತ ಚಾನೆಲ್‌ಗಳು ಸುಳ್ಳು ಸುದ್ದಿಗಳನ್ನು ಹೇಗೆ ಹರಡಬಹುದು? ಇದು ಅತ್ಯಂತ ಅಗೌರವ ಮತ್ತು ಬೇಜವಾಬ್ದಾರಿ. ದಯವಿಟ್ಟು ಕುಟುಂಬಕ್ಕೆ ಮತ್ತು ಅದರ ಗೌಪ್ಯತೆಯ ಅಗತ್ಯಕ್ಕೆ ಸರಿಯಾದ ಗೌರವವನ್ನು ನೀಡಿ ಎಂದು ಹೇಮಮಾಲಿನಿ ಸ್ಪಷ್ಟನೆ ನೀಡಿದ್ದಾರೆ.