Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರ ವೈದ್ಯ ಉಮರ್ ನಬಿ ತಾಯಿ ಸೇರಿದಂತೆ 13 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪುಲ್ವಾಮಾದಲ್ಲಿ ಉಮರ್‌ನ ಇಬ್ಬರು ಸಹೋದರರನ್ನು ವಶಕ್ಕೆ ಪಡೆಯಲಾಗಿದೆ. ಇನ್ನೂ ದೆಹಲಿಯ ಲಾಡ್ಜ್‌ಗಳ ಮೇಲೆ ದಾಳಿ ಮಾಡಿ ಕೆಲವು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಸುಮಾರು 12 ಮೊಬೈಲ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅನಂತನಾಗ್ ಜಿಎಂಸಿಯಲ್ಲಿ ರೆಸಿಡೆಂಟ್ ಡಾಕ್ಟರ್ ಆಗಿ ಕೆಲಸ ಮಾಡಿದ್ದ ಉಮರ್, ಬಳಿಕ ದೆಹಲಿಗೆ ಹೋಗಿದ್ದ. ಸದ್ಯ ಫರೀದಾಬಾದ್‌ನ ಅಲ್ ಫಲಾಹ್ ಮೆಡಿಕಲ್ ಕಾಲೇಜಿನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದ. ಪೊಲೀಸರು ಅಲ್ ಫಲಾಹ್ ಕಾಲೇಜಿನ ಮೇಲೆ ಸಹ ದಾಳಿ ನಡೆಸಿದ್ದಾರೆ.
ಇನ್ನೂ ಶಂಕಿತನ ಬಗ್ಗೆ ಮಾಹಿತಿ ಕಲೆಹಾಕಲು 200ಕ್ಕೂ ಹೆಚ್ಚು ಪೊಲೀಸರು 150ಕ್ಕೂ ಹೆಚ್ಚು ಸಿಸಿಟಿವಿಯನ್ನು ಪರಿಶೀಲಿಸುತ್ತಿದ್ದಾರೆ.