Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಆಸ್ತಿ ಆಸೆ, ಹಣದ ಆಸೆಗಾಗಿ ಸಾಕು ತಾಯಿಯನ್ನೇ ಕೊಲೆ ಮಾಡಿದ ಮಗಳು
ಕರ್ನಾಟಕ

ಆಸ್ತಿ ಆಸೆ, ಹಣದ ಆಸೆಗಾಗಿ ಸಾಕು ತಾಯಿಯನ್ನೇ ಕೊಲೆ ಮಾಡಿದ ಮಗಳು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com 

ಚಿಕ್ಕಮಗಳೂರು: ಆಸ್ತಿ ಮೇಲಿನ ಆಸೆಗೆ ಸಾಕು ತಾಯಿಯನ್ನೇ ಮಗಳು ಕೊಲೆ ಮಾಡಿರುವ  ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್‌.ಆ‌ರ್.ಪುರ ತಾಲೂಕಿನ ಬಂಡಿಮಠ ಗ್ರಾಮದಲ್ಲಿ ನಡೆದಿದೆ. ಕುಸುಮ (62) ಕೊಲೆಯಾದ ದುರ್ದೈವಿಯಾಗಿದ್ದು, ಆರೋಪಿ ಸುಧಾಳನ್ನ ಪೊಲೀಸರು ಬಂಧಿಸಿದ್ದಾರೆ. ರಾತ್ರಿ ವೇಳೆ ಮಲಗಿದ್ದ ಕುಸುಮಾರನ್ನು ತಲೆದಿಂಬಿನಿಂದ ಉಸಿರುಗಟ್ಟಿಸಿ ಸುಧಾ ಕೊಲೆ ಮಾಡಿದ್ದಾಳೆ ಎನ್ನಲಾಗಿದೆ.

ಕುಸುಮ ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರದವರಾಗಿದ್ದು, ಬದುಕಿಗಾಗಿ ಬಾಳೆಹೊನ್ನೂರಿನ ಬಂಡಿಮಠದಲ್ಲಿ ವಾಸವಿದ್ದರು. ಕೂಲಿ ಕೆಲಸ ಮಾಡಿ ಬದುಕು ಕಟ್ಟಿಕೊಂಡಿದ್ದ ಇವರನ್ನುಗಂಡ ಬಿಟ್ಟು ಹೋಗಿದ್ದ. ಹೀಗಾಗಿ ಒಬ್ಬಂಟಿ ಜೀವನಕ್ಕೆ ಆಸರೆಯಾಗಲೆಂದು ತನ್ನ ತಂಗಿಯ ಮಗಳನ್ನೇ ತಂದು ಮುದ್ದಾಗಿ ಸಾಕಿದ್ದರು. ಮೈಸೂರಿಗೆ ಮದುವೆಯನ್ನೂ ಮಾಡಿಕೊಟ್ಟು, ಎನ್.ಆರ್. ಪುರದಲ್ಲಿ ತಮಗೆ ಇದ್ದ ಸ್ವಲ್ಪ ಕಾಫಿ ತೋಟವನ್ನ ಸುಧಾಳ ಹೆಸರಿಗೆ ವಿಲ್ ಕೂಡ ಮಾಡಿದ್ದರು. ಆದರೆ ಬಳಿಕ ಕುಸುಮ ಸಾಕು ಮಗಳಿಂದ ಆ ಆಸ್ತಿಯನ್ನು ಹಿಂಪಡೆದಿದ್ದರು. ನೀಡಿದ್ದ ಆಸ್ತಿ ಹಿಂಪಡೆದ ಸಿಟ್ಟಲ್ಲಿದ್ದ ಸುಧಾ, ಸ್ವಲ್ಪ ಆಸ್ತಿ ಮಾರಿದ್ದ ಹಣವನ್ನ ಕೊಡುವಂತೆ ಕುಸುಮಾಗೆ ಪೀಡಿಸುತ್ತಿದ್ದರು. ಆಗಾಗ ಇದೇ ವಿಚಾರವಾಗಿ ಇಬ್ಬರ ನಡುವೆ ಗಲಾಟೆಯೂ ನಡೆಯುತ್ತಿತ್ತು ಎನ್ನಲಾಗಿದೆ.

ಸದ್ಯ ಕುಸುಮ ವಾಸವಿದ್ದ ಬಂಡಿಮಠದ ಮನೆ ಭದ್ರಾ ನದಿಯ ತೀರದಲ್ಲಿದ್ದು, ಮಳೆಗಾಲದಲ್ಲಿ ಈ ಭಾಗ ಸಂಪೂರ್ಣ ಮುಳುಗಡೆಯಾಗುತ್ತೆ. ಹೀಗಾಗಿ ಗ್ರಾಮಸ್ಥರನ್ನ ಸ್ಥಳಾಂತರ ಮಾಡಲು ಜಿಲ್ಲಾಡಳಿತ ಪ್ಲ್ಯಾನ್​ ಮಾಡಿರುವ ಕಾರಣ, ಮನೆ ತನ್ನ ಹೆಸರಿಗೆ ಬಂದ್ರೆ ಪರಿಹಾರ ಕೂಡ ತನಗೆ ಸಿಗುತ್ತೆ ಎಂಬ ಉದ್ದೇಶ ಸುಧಾದಾಗಿತ್ತು. ಹೀಗಾಗಿ ಸೋಮವಾರ (ನ.10) ಮೈಸೂರಿನಿಂದ ಬಂಡಿಮಠಕ್ಕೆ ಬಂದಿದ್ದ ಸುಧಾ, ರಾತ್ರಿ ಕುಸುಮಾ ಮಲಗಿದ್ದ ವೇಳೆ ತಲೆದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ.

 

https://www.newsics.com/2025/11/12/tenant-can-never-take-ownership-of-house-supreme-court/

 

TAGGED:#crime #case #murder #mother #chikkamagluru #daughter
Share This Article
Facebook Twitter Copy Link Print
Previous Article ಬಾಡಿಗೆದಾರನು ಮನೆಯ ಮಾಲೀಕತ್ವವನ್ನು ಎಂದಿಗೂ ಪಡೆಯಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್
Next Article ದೆಹಲಿ ಸ್ಫೋಟಕ್ಕೆ ಸಂಬಂಧಿಸಿದ ಸಂಚುಕೋರರನ್ನು ಬಿಡಬೇಡಿ, ಬೇಟೆಯಾಡಿ ಶಿಕ್ಷಿಸಿ – ಅಮಿತ್‌ ಶಾ

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?