Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಮಡಿಕೇರಿ: ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವಿಗೀಡಾಗಿದ್ದಾರೆ.
ಪ್ರಾಥಮಿಕ ವರದಿಗಳ ಪ್ರಕಾರ ಮೃತಪಟ್ಟವರು ಮಡಿಕೇರಿ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳೆಂದು ತಿಳಿದುಬಂದಿದ್ದು, ಬುಧವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿದೆ.
ಕಾಲೇಜಿನ ಚಂಗಪ್ಪ (19) ಹಾಗೂ ತರುಣ್ ತಿಮ್ಮಯ್ಯ ಮೃತ ವಿದ್ಯಾರ್ಥಿಗಳೆನ್ನಲಾಗಿದ್ದು, ಮತ್ತೋರ್ವ ವಿದ್ಯಾರ್ಥಿ ಜೀವ ಉಳಿಸಿಕೊಂಡಿದ್ದಾನೆ.
ಕಾಲೇಜಿನ ಮೂವರು ವಿದ್ಯಾರ್ಥಿಗಳು ಬುಧವಾರ ಮಧ್ಯಾಹ್ನ ಹೇರೂರು ಗ್ರಾಮದ ಹಾರಂಗಿ ಹಿನ್ನೀರಿನಲ್ಲಿ ಸ್ನಾನಕ್ಕೆಂದು ಇಳಿದಿದ್ದು, ಈ ಪೈಕಿ ಇಬ್ಬರು ಮೇಲೆ ಬರಲಾರದೆ ಜಲ ಸಮಾಧಿಯಾಗಿದ್ದಾರೆ.
ವಿಷಯ ತಿಳಿದ ಸುಂಟಿಕೊಪ್ಪ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಶವಗಳಿಗಾಗಿ ಶೋಧ ನಡೆಸುತ್ತಿದ್ದಾರೆ.
Embarrassed CM ನನ್ ಹೆಂಡ್ತಿಗೂ ಫ್ರೀ ರೇವಣ್ಣ ಹೆಂಡ್ತಿಗೂ ಫ್ರೀ ಎಂದು ಮುಜುಗರಕ್ಕೀಡಾದ ಸಿಎಂ!