Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು: ಬಿಜೆಪಿ ಕಾರ್ಯಕರ್ತರೊಬ್ಬರು ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ವೈಯ್ಯಾಲಿಕಾವಲ್ ನಲ್ಲಿ ನಡೆದಿದೆ.
ವೆಂಕಟೇಶ್ ಆತ್ಮಹತ್ಯೆಗೆ ಶರಣಾಗಿರುವ ಬಿಜೆಪಿ ಕಾರ್ಯಕರ್ತ. ಮಲ್ಲೇಶ್ವರಂ ಬಿಜೆಪಿ ಮಂಡಲದ ಕಾರ್ಯಕರ್ತರಾಗಿದ್ದ ವೆಂಕಟೇಶ್, ಮಾಜಿ ಡಿಸಿಎಂ ಅಶ್ವತ್ಥನಾರಾಯಣ ಅವರಿಗೆ ಆಪ್ತರಾಗಿದ್ದರು. ವೈಯ್ಯಾಲಿಕಾವಲ್ ನಲ್ಲಿರುವ ತನ್ನ ಟೂರ್ಸ್ ಆಂಡ್ ಟ್ರಾವೆಲ್ಸ್ ಕಚೇರಿಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವೈಯಾಲಿಕಾವಲ್ನಲ್ಲಿರುವ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತ ವೆಂಕಟೇಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ವೆಂಕಟೇಶ್ ಆತ್ಮಹತ್ಯೆ ನಿರ್ಧಾರ ತೆಗೆದುಕೊಳ್ಳಲು ಹಣಕಾಸು ಸಮಸ್ಯೆಗೆ ಕಾರಣ ಎನ್ನಲಾಗ್ತಿದೆ. ಟೂರ್ಸ್ ಆ್ಯಂಡ್ ಟ್ರಾವೆಲ್ ಬ್ಯುಸಿನೆಸ್ ನಡೆಸುತ್ತಿದ್ರು, ಹಣದ ಸಮಸ್ಯೆ ಹೆಚ್ಚಿತ್ತು. ಇದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೂ ಮುನ್ನ ವಿಡಿಯೋ ಮಾಡಿಟ್ಟಿದ್ದು, ಹಣಕಾಸಿನ ಸಮಸ್ಯೆ ಬಗ್ಗೆ ಹೇಳಿದ್ದಾರೆ ಅಲ್ಲದೇ ಜೀವನದಲ್ಲಿ ಏನಾದರೂ ಆಗಿ ಆದರೆ ಚೀಟಿ ಏಜೆಂಟ್ ಮಾತ್ರ ಆಗಬೇಡಿ ಎಂದು ರೆಕಾರ್ಡ್ ಮಾಡಿಟ್ಟಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.
https://www.newsics.com/2025/11/13/car-hits-bike-and-pedestrian-three-die-on-the-spot/