Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಪುಣೆ: ಕಂಟೇನರ್ ಟ್ರಕ್ ನಿಯಂತ್ರಣ ತಪ್ಪಿ ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದು ಆರು ಜನರು ಸಾವನ್ನಪ್ಪಿರುವ ಘಟನೆ ಪುಣೆ-ಬೆಂಗಳೂರು ಹೆದ್ದಾರಿಯ ನವಲೆ ಸೇತುವೆ ಬಳಿ ನಡೆದಿದೆ.
2-3 ಭಾರೀ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಮೃತರನ್ನು ಗುರುತಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಪುಣೆ ಸಿಪಿ ಅಮಿತೇಶ್ ಕುಮಾರ್ ವರದಿಗಾರರಿಗೆ ತಿಳಿಸಿದರು.
ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಮೃತ ವ್ಯಕ್ತಿಗಳನ್ನು ಗುರುತಿಸಲು ನಾವು ಪ್ರಯತ್ನಿಸುತ್ತಿದ್ದೇವೆ ಎಂದು ಸಿಪಿ ಕುಮಾರ್ ಹೇಳಿದರು.