Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬಾಲಿವುಡ್ನ ಹಿರಿಯ ನಟ ಧರ್ಮೇಂದ್ರ ಅವರನ್ನು ಇತ್ತೀಚೆಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಆರೋಗ್ಯದಲ್ಲಿ ತೀವ್ರ ಏರುಪೇರು ಆಗಿದ್ದರಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಅವರನ್ನು ಸೇರಿಸಲಾಗಿತ್ತು.
ತೀವ್ರ ನಿಗಾ ಘಟಕದಲ್ಲಿ ಧರ್ಮೇಂದ್ರ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಅವರ ಕುಟುಂಬದವರಿಗೆ, ಆಪ್ತರಿಗೆ, ಅಭಿಮಾನಿಗಳಿಗೆ ಆತಂಕ ಆಗಿತ್ತು. ಇದೇ ವೇಳೆ ಧರ್ಮೇಂದ್ರ ಅವರ ಒಂದು ವಿಡಿಯೋ ವೈರಲ್ ಆಯಿತು. ಆ ವಿಡಿಯೋ ಚಿತ್ರಿಸಿದ್ದ ಆಸ್ಪತ್ರೆ ಸಿಬ್ಬಂದಿಯನ್ನು ಈಗ ಬಂಧಿಸಲಾಗಿದೆ.
ಆಸ್ಪತ್ರೆಯ ಬೆಡ್ ಮೇಲೆ ಮಲಗಿದ್ದ ಧರ್ಮೇಂದ್ರ ಅವರ ವಿಡಿಯೋವನ್ನು ರಹಸ್ಯವಾಗಿ ಚಿತ್ರಿಸಿ ವೈರಲ್ ಮಾಡಿದ್ದಕ್ಕಾಗಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬುಧವಾರ ಬೆಳಗ್ಗೆ ಧರ್ಮೇಂದ್ರ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಮನೆಯಲ್ಲೇ ಅವರಿಗೆ ಚಿಕಿತ್ಸೆ ಮುಂದುವರಿಸಲು ಕುಟುಂಬದವರು ತೀರ್ಮಾನಿಸಿದ್ದಾರೆ