Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ದೆಹಲಿ: ಸಿಎಂ ಸಿದ್ದರಾಮಯ್ಯ ದೆಹಲಿಗೆ ಭೇಟಿ ನೀಡಿದ್ದಾರೆ. ರಾಜ್ಯ ರಾಜಕೀಯದಲ್ಲಿ, ಅದರಲ್ಲೂ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ನವೆಂಬರ್ ಕ್ರಾಂತಿಯ ಚರ್ಚೆ ಜೋರಾಗಿತ್ತು. ಈ ಹೊತ್ತಲ್ಲೇ ಸಿಎಂ ಸಿದ್ದರಾಮಯ್ಯ ದೆಹಲಿಗೆ ಬಂದಿದ್ದಾರೆ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಸೇರಿದಂತೆ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದಾರೆ. ಈ ವೇಳೆ ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎನ್ನಲಾಗಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ ವೇಣುಗೋಪಾಲ್ ಜೊತೆಗೆ ಸಿಎಂ ಸಿದ್ಧರಾಮಯ್ಯ ಚರ್ಚಿಸಿ ಸಂಪುಟ ಪುನಾರಚನೆ ಮಾಡಲಿದ್ದಾರೆ. ಚರ್ಚೆ ಬಳಿಕ ಯಾರಿಗೆ ಸಚಿವ ಸ್ಥಾನ ನೀಡಬೇಕು. ಯಾರನ್ನು ತೆಗೆದು ಹಾಕಬೇಕು ಎನ್ನುವ ಅಂತಿಮ ಲೀಸ್ಟ್ ಕಾಂಗ್ರೆಸ್ ಹೈಕಮಾಂಡ್ ಗೆ ಸಿಎಂ ಸಿದ್ಧರಾಮಯ್ಯ ಸಲ್ಲಿಸೋ ಸಾಧ್ಯತೆ ಇದೆ.
ರಾಜ್ಯ ಸಂಪುಟದ ಹಾಲಿ 8 ರಿಂದ 12 ಸಚಿವರನ್ನು ಬದಲಾವಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
https://www.newsics.com/2025/11/15/former-union-minister-r-k-singh-suspended-from-bjp-for-6-years/