Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಕನ್ನಡ ಕಿರುತೆರೆಯ ಜನಪ್ರಿಯ ನಟಿ ಸುಷ್ಮಾ ಶೇಖರ್ ಅವರು ತಮ್ಮ ಗೆಳೆಯನ ಜೊತೆ ಹೊಸ ಜೀವನಕ್ಕೆ ಕಾಲಿಡಲು ಸಿದ್ಧರಾಗಿದ್ದು ಇದೀಗ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಸುಷ್ಮಾ ಶೇಖರ್ ಅವರು ಕನ್ನಡ ಕಿರುತೆರೆಯಲ್ಲಿ ಹಲವಾರು ಧಾರಾವಾಹಿಗಳಲ್ಲಿ ನಟಿಸಿ ಜನಪ್ರಿಯತೆ ಗಳಿಸಿದ್ದಾರೆ. ಲಕುಮಿ, ಯಾರೇ ನೀ ಮೋಹಿನಿ, ಗಿಣಿರಾಮ ಮುಂತಾದ ಧಾರಾವಾಹಿಗಳಲ್ಲಿ ಅವರ ಅಭಿನಯ ಪ್ರೇಕ್ಷಕರ ಮನಗೆದ್ದಿದೆ. ಅದರಲ್ಲೂ ಯಾರೇ ನೀ ಮೋಹಿನಿ ಧಾರಾವಾಹಿಯಲ್ಲಿ ಬೆಳ್ಳಿ ಪಾತ್ರದ ಮೂಲಕ ಅವರು ಕನ್ನಡಿಗರ ಮನೆ ಮಾತಾದರು.
ಇದೀಗ ಕಿರುತೆರೆ ನಟಿ ಸುಷ್ಮಾ ಶೇಖರ್ ಅವರು ತಮ್ಮ ಗೆಳೆಯನೊಂದಿಗೆ ಉಂಗುರು ಬದಲಾಯಿಸಿಕೊಂಡು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ಮೂಲಕ ಹೊಸ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.