Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು: ಸಾವಿರಾರು ಸಸಿಗಳನ್ನು ನೆಟ್ಟು, ಮಕ್ಕಳಂತೆ ಪೋಷಿಸಿ, ಜಗತ್ತಿಗೆ ಪರಿಸರ ಪ್ರೇಮದ ಪಾಠ ಹೇಳಿದ ಪದ್ಮಶ್ರೀ ಪುರಸ್ಕೃತೆ, ‘ವೃಕ್ಷಮಾತೆ’ ಸಾಲುಮರದ ತಿಮ್ಮಕ್ಕ (114) ಅವರು ಶನಿವಾರ ಪಂಚಭೂತಗಳಲ್ಲಿ ಲೀನವಾದರು.
ಬೆಂಗಳೂರಿನ ಜ್ಞಾನಭಾರತಿ ಬಳಿಯ ಕಲಾಗ್ರಾಮ ಆವರಣದಲ್ಲಿ, ನೂರಾರು ಅಭಿಮಾನಿಗಳು, ಗಣ್ಯರು ಮತ್ತು ಕುಟುಂಬಸ್ಥರ ನೋವಿನ ನಡುವೆ, ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನೆರವೇರಿತು.

ಶುಕ್ರವಾರ (ನ.14) ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಕಾಯಿಲೆಯಿಂದ ನಿಧನರಾದ ತಿಮ್ಮಕ್ಕನವರ ಪಾರ್ಥಿವ ಶರೀರವನ್ನು, ಶನಿವಾರ ಬೆಳಗ್ಗೆ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಸಾರ್ವಜನಿಕ ದರ್ಶನಕ್ಕಾಗಿ ಇರಿಸಲಾಗಿತ್ತು.
ವಿಪಕ್ಷ ನಾಯಕ ಆರ್. ಅಶೋಕ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ಗಣ್ಯರು, ಕಲಾವಿದರು ಮತ್ತು ಸಾವಿರಾರು ಸಾರ್ವಜನಿಕರು ಆಗಮಿಸಿ, ಹಸಿರು ತಾಯಿಗೆ ಅಂತಿಮ ನಮನ ಸಲ್ಲಿಸಿದರು.
ಅಂತಿಮ ದರ್ಶನಕ್ಕೂ ಮುನ್ನ, ಅವರ ಪಾರ್ಥಿವ ಶರೀರವನ್ನು ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಹುಲಿಕಲ್ ಗ್ರಾಮ ಹಾಗೂ ಹಾಸನ ಜಿಲ್ಲೆಯ ಬೇಲೂರಿಗೆ ಕೊಂಡೊಯ್ದು, ಅಲ್ಲಿನ ಜನರಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ನಂತರ, ಬೆಳಗ್ಗೆ 8 ಗಂಟೆಯ ವೇಳೆಗೆ ಪಾರ್ಥಿವ ಶರೀರವನ್ನು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರಕ್ಕೆ ತರಲಾಯಿತು.
ಮಧ್ಯಾಹ್ನದ ಬಳಿಕ, ಮಲ್ಲತಹಳ್ಳಿಯಲ್ಲಿರುವ ಕಲಾಗ್ರಾಮಕ್ಕೆ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾಯಿತು. ಅಲ್ಲಿ, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮತ್ತು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಸರ್ಕಾರದ ಪರವಾಗಿ ಅಂತಿಮ ಗೌರವ ಸಲ್ಲಿಸಿದರು.
ಪೊಲೀಸರು ಮೂರು ಸುತ್ತು ಕುಶಾಲತೋಪು ಹಾರಿಸುವ ಮೂಲಕ ‘ವೃಕ್ಷಮಾತೆ’ಗೆ ಗೌರವ ವಂದನೆ ಸಲ್ಲಿಸಿದರು. ನಂತರ, ಅವರ ಕುಟುಂಬಸ್ಥರು ಧಾರ್ಮಿಕ ವಿಧಿವಿಧಾನಗಳನ್ನು ಪೂರೈಸಿ, ಅಂತ್ಯಕ್ರಿಯೆ ನೆರವೇರಿಸಿದರು.
Shubman Gill hospitalized ಶುಭಮನ್ ಗಿಲ್‌ಗೆ ಕುತ್ತಿಗೆ ನೋವು: ಆಸ್ಪತ್ರೆಗೆ ದಾಖಲು