Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಯುವಕನನ್ನು ಲಾಡ್ಜ್ ಗೆ ಕರೆದೊಯ್ದು 7 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿದ ಯುವತಿ ಅರೆಸ್ಟ್
ಕರ್ನಾಟಕಪ್ರಮುಖ

ಯುವಕನನ್ನು ಲಾಡ್ಜ್ ಗೆ ಕರೆದೊಯ್ದು 7 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿದ ಯುವತಿ ಅರೆಸ್ಟ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTubenewsics.com

ಬೆಂಗಳೂರು: ಯುವತಿಯೊರ್ವಳು ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾದ ಯುವಕನನ್ನು ಲಾಡ್ಜ್‌ಗೆ ಕರೆದೊಯ್ದ 7 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಸಂತ್ರಸ್ತ ಯುವಕ ನೀಡಿದ ದೂರಿನ ಮೇರೆಗೆ ಕವಿಪ್ರಿಯಾ ಎಂಬಾಕೆ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆಕೆಯನ್ನು ಬಂಧಿಸಿದ್ದಾರೆ.

ಪೀಣ್ಯದ ನಾಗಸಂದ್ರದ ಪೇಯಿಂಗ್ ಗೆಸ್ಟ್ (ಪಿ.ಜಿ)ನಲ್ಲಿ ವಾಸವಾಗಿದ್ದ ಯುವಕ, ನಗರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಎರಡು ತಿಂಗಳ ಹಿಂದೆ ‘ಹ್ಯಾಪನ್ ಆ್ಯಪ್’ ಹೆಸರಿನ ಡೇಟಿಂಗ್ ಆ್ಯಪ್‌ನಲ್ಲಿ ಯುವತಿಯನ್ನು ಪರಿಚಯಿಸಿಕೊಂಡಿದ್ದ.

ಇಬ್ಬರೂ ಮೊಬೈಲ್ ಸಂಖ್ಯೆ ವಿನಿಮಯ ಮಾಡಿಕೊಂಡು ಮಾತನಾಡುತ್ತಿದ್ದರು. ನವೆಂಬರ್ 1ರಂದು ಇಂದಿರಾನಗರದ ರೆಸ್ಟೋರೆಂಟ್‌ವೊಂದರಲ್ಲಿ ಇಬ್ಬರು ಭೇಟಿಯಾಗಿ ಮದ್ಯದ ಪಾರ್ಟಿ ಮಾಡಿದ್ದಾರೆ.

ಮದ್ಯ ಸೇವನೆ ಬಳಿಕ ಪಿಜಿಗೆ ಹೋಗಲು ಸಾಧ್ಯವಿಲ್ಲ ಎಂದು ಹೇಳಿದ್ದ ಯುವತಿ, ಲಾಡ್ಜ್‌ ಒಂದರಲ್ಲಿ ಕೊಠಡಿ ಬುಕ್ ಮಾಡಿದ್ದಳು. ಆನ್ ಲೈನ್ ಮೂಲಕ ಊಟ ತರಿಸಿಕೊಂಡು ಇಬ್ಬರೂ ಸೇವಿಸಿದ್ದರು. ನಂತರ ಯುವತಿಯು ಕೊಟ್ಟ ನೀರು ಕುಡಿದ ಬಳಿಕ ಯುವಕ ಪ್ರಜ್ಞೆ ಕಳೆದುಕೊಂಡಿದ್ದಾನೆ. ಬೆಳಗ್ಗೆ ಎದ್ದು ನೋಡಿದಾಗ ಚಿನ್ನದ ಸರ, ಚಿನ್ನದ ಕೈಬಳೆ ಸೇರಿದಂತೆ 58 ಗ್ರಾಂ ಚಿನ್ನಾಭರಣ, ರೂ.10 ಸಾವಿರ ನಗದನ್ನು ದೋಚಿ ಪರಾರಿಯಾಗಿರುವುದು ತಿಳಿದಿದೆ, ಬಳಿಕ ಪೊಲೀಸರಿಗೆ ದೂರು ನೀಡಿದ್ದಾರೆ.

ದೂರು ಬೆನ್ನಲ್ಲೇ ಪೊಲೀಸರು ತಮಿಳುನಾಡಿನ ಕರೂರಿನ ಕವಿಪ್ರಿಯಾ (24) ಮತ್ತು ಆಕೆಯ ಗೆಳೆಯ ಹರ್ಷವರ್ಧನ್ (25)ನನ್ನು ಬಂಧನಕ್ಕೊಳಪಡಿಸಿದ್ದಾರೆ.

ವಿಚಾರಣೆ ವೇಳೆ ಇಬ್ಬರೂ ಮಾಡಿದ ಮೊದಲ ಅಪರಾಧ ಕೃತ್ಯ ಎಂಬುದು ತಿಳಿದುಬಂದಿದೆ. ಇಬ್ಬರೂ ಡೇಟಿಂಗ್ ಆ್ಯಪ್ ನಲ್ಲಿ ಭೇಟಿಯಾಗಿ, ಸಂಬಂಧ ಹೊಂದಿದ್ದು, ಐಷಾರಾಮಿ ಜೀವನ ನಡೆಸಲು ಕೆಲವು ಸಾಲ ಆ್ಯಪ್‌ಗಳಲ್ಲಿ ಸಾಲ ಪಡೆದಿದ್ದರು. ಸಾಲವನ್ನು ಮರುಪಾವತಿಸಲು ಸಾಧ್ಯವಾಗದ ಕಾರಣ, ಡೇಟಿಂಗ್ ಆ್ಯಪ್‌ ಮೂಲಕ ವಂಚನೆ ಮಾಡಲು ಪಿತೂರಿ ನಡೆಸಿದ್ದರು. ಇದೀಗ ಇಬ್ಬರ ವಿರುದ್ಧ ಪೊಲೀಸರು ಕಳ್ಳತನ ಹಾಗೂ ವಂಚನೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನನ್ನಿಂದ ಆಗ್ತಿಲ್ಲ , ನಾನು ಸಾಯುತ್ತೇನೆ ಎಂದು ಬಿಗ್ ಬಾಸ್ ಮನೆಯಲ್ಲಿ ಸಂಜನಾ ಗಲ್ರಾನಿ ಬಿಕ್ಕಿ ಬಿಕ್ಕಿ ಅತ್ತಿದೇಕೆ?; ಸಂಜನಾಗೆ ಅನ್ಯಾಯ ಆಗಿದ್ದೆಲ್ಲಿ?

TAGGED:Young woman arrested for taking young man to lodge and robbing him of Rs. 7 lakh worth of gold jewellery
Share This Article
Facebook Twitter Copy Link Print
Previous Article ನನ್ನಿಂದ ಆಗ್ತಿಲ್ಲ , ನಾನು ಸಾಯುತ್ತೇನೆ ಎಂದು ಬಿಗ್ ಬಾಸ್ ಮನೆಯಲ್ಲಿ ಸಂಜನಾ ಗಲ್ರಾನಿ ಬಿಕ್ಕಿ ಬಿಕ್ಕಿ ಅತ್ತಿದೇಕೆ?; ಸಂಜನಾಗೆ ಅನ್ಯಾಯ ಆಗಿದ್ದೆಲ್ಲಿ?
Next Article Koppal ಮಹಿಳೆಗೆ ಮದ್ಯ ಕುಡಿಸಿ ನಾಲ್ವರಿಂದ ಸಾಮೂಹಿಕ ಅತ್ಯಾ*ಚಾರ, ಮಹಿಳೆ ಸ್ಥಿತಿ ಚಿಂತಾಜನಕ

Popular Posts

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read

ಹೃದಯ ಸಂಬಂಧಿ ಕಾಯಿಲೆಗೆ ಮುಖ್ಯ ಕಾರಣವೇನು?; ಯಾವಾಗ ಪರೀಕ್ಷೆ ಮಾಡಿಸಿಕೊಳ್ಳಬೇಕು?

1 Min Read

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read

You Might Also Like

ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read
ಪ್ರಮುಖ

ಅಯೋಧ್ಯೆಯ ರಾಮ ಮಂದಿರ ದೇಣಿಗೆ ವಿವಾದ ; 1250 ಚಿನ್ನ, ವಜ್ರಗಳಿಂದ ಅಲಂಕರಿಸಿದ ಇಟ್ಟಿಗೆಗಳು ನಾಪತ್ತೆ!

2 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read

Social Networks

Facebook-f Instagram Twitter
Welcome Back!

Sign in to your account

Lost your password?