Subscribe ನ್ಯೂಸಿಕ್ಸ್ ಕನ್ನಡ NewsicsKannada/YouTubenewsics.com
ದೆಹಲಿ ಕೆಂಪು ಕೋಟೆ ಬಳಿ ನಡೆಸಿದ ಉಗ್ರರ ಕಾರು ಸ್ಫೋಟ ಪ್ರಕರಣದಲ್ಲಿ ಕೆಲ ಸ್ಫೋಟಕ ಮಾಹಿತಿಗಳು ಬಯಲಾಗಿದೆ. ತನಿಖೆ ತೀವ್ರಗೊಳ್ಳುತ್ತಿದ್ದಂತೆ ಇದೀಗ ಎನ್ಐಎ ಅಧಿಕಾರಿಗಳು ಪ್ರಕರಣ ಸಂಬಂಧ ಮತ್ತೊಬ್ಬನ ಬಂಧಿಸಿದ್ದಾರೆ. ಶ್ರೀನಗರದ ನಿವಾಸಿ, ದೆಹಲಿ ಸ್ಫೋಟದ ಪ್ರಮುಖ ರೂವಾರಿಗಳಲ್ಲಿ ಒಬ್ಬನಾಗಿರುವ ಜಸೀರ್ ಬಿಲಾಲ್ ವಾನಿ ಅಲಿಯಾಸ್ ದಾನೀಶ್ನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ.
ಆರೋಪಿಯನ್ನು ಜಾಸಿರ್ ಬಿಲಾಲ್ ವಾನಿ ಅಲಿಯಾಸ್ ಡ್ಯಾನಿಶ್ ಎಂದು ಗುರುತಿಸಲಾಗಿದ್ದು, ಆತ್ಮಹತ್ಯಾ ಬಾಂಬರ್ ಡಾ. ಉಮರ್ ಉನ್ ನಬಿ ಜೊತೆ ನಿಕಟವಾಗಿ ಕೆಲಸ ಮಾಡಿದ್ದ. ಆತನಿಗೆ ಇವನೇ ತಾಂತ್ರಿಕ ಸಹಾಯವನ್ನು ಕೂಡ ನೀಡಿದ್ದ ಎಂದು ಆರೋಪಿಸಲಾಗಿದೆ.
ಅನಂತ್ನಾಗ್ ಜಿಲ್ಲೆಯ ಖಾಜಿಗುಂಡ್ ನಿವಾಸಿಯಾಗಿರುವ ಜಾಸಿರ್ ವಾನಿ, ದೆಹಲಿಯ ದಾಳಿಯ ಹಿಂದಿನ ಸಕ್ರಿಯ ಸಹ-ಸಂಚುಗಾರನಾಗಿದ್ದ. ರಾಷ್ಟ್ರ ರಾಜಧಾನಿಯಲ್ಲಿ ಸ್ಫೋಟಕ್ಕೆ ಮುಂಚಿತವಾಗಿ ಡ್ರೋನ್ಗಳನ್ನು ಮಾರ್ಪಡಿಸಿ ರಾಕೆಟ್ಗಳನ್ನು ತಯಾರಿಸಲು ಪ್ರಯತ್ನಿಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆತನನ್ನು ಈಗ ದೆಹಲಿಗೆ ಕರೆತರಲಾಗಿದೆ. ಅಲ್ಲಿ ಆತನನ್ನು NIA ಪ್ರಧಾನ ಕಚೇರಿಯಲ್ಲಿ ವಿಚಾರಣೆ ನಡೆಸಲಾಗುವುದು.
ಬಾಂಬ್ ಸ್ಫೋಟದ ಹಿಂದಿನ ಪಿತೂರಿಯನ್ನು ಬಯಲು ಮಾಡಲು ವಿವಿಧ ಕೋನಗಳನ್ನು ಅನ್ವೇಷಿಸುವುದನ್ನು ಮುಂದುವರೆಸಿರುವುದಾಗಿ ತನಿಖಾ ಸಂಸ್ಥೆ ತನ್ನ ಹೇಳಿಕೆಯಲ್ಲಿ ತಿಳಿಸಿದೆ. “ಭಯೋತ್ಪಾದನಾ ನಿಗ್ರಹ ಸಂಸ್ಥೆಯ ಹಲವಾರು ತಂಡಗಳು ಹಲವು ಸುಳಿವುಗಳನ್ನು ಹುಡುಕುತ್ತಿವೆ ಮತ್ತು ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬ ವ್ಯಕ್ತಿಯನ್ನು ಗುರುತಿಸಲು ರಾಜ್ಯಗಳಾದ್ಯಂತ ಶೋಧ ನಡೆಸುತ್ತಿವೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ
ಬಿಗ್ ಬಾಸ್ ಗಿಲ್ಲಿ ನಟನ ವಿರುದ್ಧ ದೂರು; ಮಹಿಳಾ ಆಯೋಗದಿಂದ ಕಮಿಷನರ್ಗೆ ಪತ್ರ,ಪತ್ರದಲ್ಲೇನಿದೆ?