Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬಿಹಾರ : ಬಿಹಾರದಲ್ಲಿ NDA ಸರ್ಕಾರ ರಚನೆಗೆ ಮುಹೂರ್ತ ಫಿಕ್ಸ್ ಆಗಿದ್ದು, ನವೆಂಬರ್ 20 ರಂದು ನಡೆಯಲಿರುವ ಬೃಹತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ.
ಪಾಟ್ನಾದ ಗಾಂಧಿ ಮೈದಾನದಲ್ಲಿ ಬಿಜೆಪಿ ಮೈತ್ರಿಕೂಟದ ಸರ್ಕಾರ ರಚನೆ ಕಾರ್ಯಕ್ರಮ ನಡೆಯಲಿದ್ದು, ಪ್ರಧಾನಿ ಮೋದಿ ಸೇರಿದಂತೆ ಹಲವು ಭಾಗಿಯಾಗಲಿದ್ದಾರೆ. ನಿತೀಶ್ ಕುಮಾರ್ ಮತ್ತೆ ಬಿಹಾರದ ಸಿಎಂ ಆಗಿ ಅಧಿಕಾರದ ಗದ್ದುಗೆ ಹಿಡಿಯವುದು ಫಿಕ್ಸ್ ಆದಂತಿದೆ ಎನ್ನಲಾಗಿದೆ.
ಇಂದು ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ಸಲ್ಲಿಕೆ ಮಾಡಲಿದ್ದಾರೆ .ಇಂದು ಬೆಳಿಗ್ಗೆ 11:30 ರ ಸುಮಾರಿಗೆ ನಡೆಯಲಿರುವ ಕೊನೆಯ ಸಚಿವ ಸಂಪುಟ ಸಭೆಯ ಅಧ್ಯಕ್ಷತೆಯನ್ನು ಹಾಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ವಹಿಸಲಿದ್ದು, ನವೆಂಬರ್ 20 ರಂದು ಹೊಸ ಸರ್ಕಾರದ ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.