Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ನವದೆಹಲಿ: ಅಮ್ಮಾ ನಿನ್ನನ್ನು ನೋಯಿಸಿದ್ದೇನೆ ಕ್ಷಮಿಸಿಬಿಡು ಎಂದು ಪತ್ರ ಬರೆದಿಟ್ಟು ಬಾಲಕನೊಬ್ಬ ದೆಹಲಿ ಮೆಟ್ರೋ ಎದುರು ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
ಮಂಗಳವಾರ ಬೆಳಗ್ಗೆ ಮನೆಯಿಂದ ಹೊರಟಿದ್ದ 16 ವರ್ಷದ ಬಾಲಕ ಡ್ರಾಮಾ ಕ್ಲಬ್ನಲ್ಲಿ ಮತ್ತೊಂದು ದಿನ ಕಳೆಯಲು ಇಷ್ಟಪಟ್ಟಿದ್ದ, ಆದರೆ ಅಂದೇ ಮಧ್ಯಾಹ್ನ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತನ್ನ ಅಂಗಾಂಗಗಳನ್ನು ದಾನ ಮಾಡುವಂತೆ ಮತ್ತು ಯಾವುದೇ ಮಗು ತಾನು ಅನುಭವಿಸಿದ ನೋವನ್ನು ಅನುಭವಿಸಬಾರದು ಎಂದು ಆತ್ಮಹತ್ಯೆ ಪತ್ರವನ್ನು ಬರೆದಿಟ್ಟಿದ್ದಾನೆ.
ಖಾಸಗಿ ಶಾಲೆಯ 10 ನೇ ತರಗತಿಯ ವಿದ್ಯಾರ್ಥಿ ಮಧ್ಯಾಹ್ನ 2.34 ಕ್ಕೆ ಮಧ್ಯ ದೆಹಲಿಯ ರಾಜೇಂದ್ರ ಪ್ಲೇಸ್ ಮೆಟ್ರೋ ನಿಲ್ದಾಣದ ಪ್ಲಾಟ್‌ಫಾರ್ಮ್‌ನಿಂದ ಹಾರಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆತನನ್ನು ಹತ್ತಿರದಲ್ಲಿದ್ದ ಬಿಎಲ್ಕೆ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಂತಿಮವಾಗಿ ಆತ ಮೃತಪಟ್ಟಿದ್ದಾನೆಂದು ವೈದ್ಯರು ಘೋಷಿಸಿದರು. ಆತ್ಮಹತ್ಯೆ ಪತ್ರದಲ್ಲಿ ಶಿಕ್ಷಕರ ಬಗ್ಗೆ ಮಾತನಾಡಿದ್ದು, ಸಾಕಷ್ಟು ದಿನಗಳಿಂದ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಬರೆದಿದ್ದಾನೆ.