Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಉಡುಪಿ : ಪಾಕಿಸ್ತಾನ ಪರ ಗೂಢಚರ್ಯೆ ಮಾಡುತ್ತಿದ್ದ ಇಬ್ಬರನ್ನ ಉಡುಪಿ ಪೊಲೀಸರು ಬಂಧಿದ್ದಾರೆ. ಬಂಧಿತರನ್ನ ರೋಹಿತ್ ಮತ್ತು ಸಂತ್ರಿ ಎಂದು ಗುರುತಿಸಲಾಗಿದೆ.
ದೇಶದ್ರೋಹದ ಕೆಲಸ ಮಾಡ್ತಿದ್ದವರ ಬಗ್ಗೆ ಅನುಮಾನ ಮೂಡಿದ್ದು, ಕೊಚ್ಚಿನ್ ಶಿಪ್ ಯಾರ್ಡ್ ಸಿಇಒ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಇಬ್ಬರನ್ನ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಬಂಧಿತರನ್ನ ರೋಹಿತ್ ಮತ್ತು ಸಂತ್ರಿ ಎಂದು ಗುರುತಿಸಲಾಗಿದೆ. ಆರೋಪಿಗಳು ಶತೃದೇಷ ಪಾಕಿಸ್ತಾನಕ್ಕೆ ಕೆಲವು ರಹಸ್ಯ ಮಾಹಿತಿಗಳನ್ನ ರವಾನಿಸುತ್ತಿದ್ದರು. ಹಣಕ್ಕಾಗಿ ದೇಶದ್ರೋಹ ಚಟುವಟಿಕೆ ನಡೆಸುತ್ತಿದ್ದರು.
ಕಳೆದ ಒಂದೂವರೆ ವರ್ಷದಿಂದ ಆರೋಪಿಗಳು ಹಡಗುಗಳಿಗೆ ಸಂಬಂಧಿಸಿದ ಗೌಪ್ಯ ಮಾಹಿತಿಯನ್ನ ವಾಟ್ಸಾಪ್ ಮೂಲಕ ಪಾಕಿಸ್ತಾನಕ್ಕೆ ರವಾನೆ ಮಾಡುತ್ತಿದ್ದರು ಎಂಬುದು ತನಿಖೆಯಲ್ಲಿ ಬಯಲಾಗಿದೆ.