Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಟಿ20 ವಿಶ್ವಕಪ್ 2026ರ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಫೆಬ್ರವರಿ 7 ರಿಂದ ಆರಂಭವಾಗಲಿರುವ ಈ ಬಾರಿಯ ಚುಟುಕು ವಿಶ್ವಕಪ್ಗೆ ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆತಿಥ್ಯವಹಿಸಲಿದೆ. ಅಷ್ಟೇ ಅಲ್ಲದೆ ಈ ಬಾರಿಯ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ್ ಮೊದಲ ಸುತ್ತಿನಲ್ಲೇ ಮುಖಾಮುಖಿಯಾಗಲಿರುವುದು ಕೂಡ ಖಚಿತವಾಗಿದೆ.
ಟಿ20 ವಿಶ್ವಕಪ್ನ ಕರುಡು ವೇಳಾಪಟ್ಟಿ ಸಿದ್ಧವಾಗಿದ್ದು, ಈ ವೇಳಾಪಟ್ಟಿ ಪ್ರಕಾರ ಭಾರತ ಮತ್ತು ಪಾಕಿಸ್ತಾನ್ ಫೆಬ್ರವರಿ 15 ರಂದು ಮುಖಾಮುಖಿಯಾಗಲಿದೆ.
ಪಾಕಿಸ್ತಾನ್ ತಂಡವು ಭಾರತದಲ್ಲಿ ಟೂರ್ನಿ ಆಡಲು ನಿರಾಕರಿಸಿರುವುದರಿಂದ ಸಾಂಪ್ರದಾಯಿಕ ಎದುರಾಳಿಗಳ ಕದನವನ್ನು ಶ್ರೀಲಂಕಾದಲ್ಲಿ ಆಯೋಜಿಸಲಾಗುತ್ತದೆ. ಅಷ್ಟೇ ಅಲ್ಲದೆ ಪಾಕಿಸ್ತಾನ್ ತಂಡವು ಸೆಮಿಫೈನಲ್ಗೇರಿದರೆ ಆ ಪಂದ್ಯವನ್ನು ಸಹ ಶ್ರೀಲಂಕಾದಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ.