Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಮುಂಬೈ: ಭಾರತದ ಸ್ಟಾರ್ ಕ್ರಿಕೆಟರ್ ಸ್ಮೃತಿ ಮಂಧಾನ ಮತ್ತು ಸಂಗೀತ ನಿರ್ದೇಶಕ ಪಲಾಶ್ ಮುಚ್ಚಲ್ ಅವರಿಬ್ಬರ ವಿವಾಹ ಕಾರ್ಯಕ್ರಮ ಅನಿರ್ದಿಷ್ಟಾವಧಿಯವರೆಗೆ ಮುಂದೂಡಿಕೆ ಆಗಿದೆ ಎನ್ನಲಾಗಿದೆ. ವರದಿಗಳ ಪ್ರಕಾರ, ಸ್ಮೃತಿ ಮಂಧಾನಳ ತಂದೆ ಶ್ರೀನಿವಾಸ್ ಮಂಧಾನ ಅವರು ಅನಾರೋಗ್ಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಕಾರಣಕ್ಕೆ ಮದುವೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಕ್ರಿಕೆಟ್ ಆಟಗಾರ್ತಿಯ ಮ್ಯಾನೇಜರ್ ಅವರು ಮಾಧ್ಯಮಗಳಿಗೆ ಈ ಮಾಹಿತಿ ನೀಡಿದ್ದಾರೆ.
ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಸಮದೋಲ್ನಲ್ಲಿರುವ ಮಂಧಾನ ಫಾರ್ಮ್ ಹೌಸ್ನಲ್ಲಿ ವಿವಾಹ ಮಹೋತ್ಸವಕ್ಕಾಗಿ ತಯಾರಿ ನಡೆದಿತ್ತು. ಇವತ್ತೇ ಕಾರ್ಯಕ್ರಮ ಇತ್ತು. ಆದರೆ, ಸ್ಮೃತಿ ಅವರ ತಂದೆ ಶ್ರೀನಿವಾಸ್ ಅವರಿಗೆ ಹೃದಯಾಘಾತಗೊಂಡಿದೆ. ಅವರನ್ನು ಸಾಂಗ್ಲಿಯಲ್ಲಿರುವ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ.
ಕಾಲೇಜಿಗೆ ಹೋಗಿಬರುವುದಾಗಿ ಹೇಳಿ ಮೂರು ಮಕ್ಕಳ ತಂದೆಯೊಂದಿಗೆ ಯುವತಿ ಪರಾರಿ?