Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ತಮಿಳುನಾಡು : 2 ಬಸ್ ಗಳ ನಡುವೆ ಡಿಕ್ಕಿಯಾಗಿ ಎಂಟು ಮಂದಿ ಸಾವನ್ನಪ್ಪಿದ್ದು,ಹಲವರು ಗಾಯಗೊಂಡಿರುವ ಘಟನೆ ತಮಿಳುನಾಡಿನ ಅಚಂಪಟ್ಟಿ ಬಳಿ ನಡೆದಿದೆ.
ತೆಂಕಾಸಿ-ಮಧುರೈ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ಪರಿಣಾಮ ಒಂದು ಬಸ್ನ ಮುಂಭಾಗವು ಸಂಪೂರ್ಣವಾಗಿ ನಾಶವಾಗಿದೆ.
ಅಪಘಾತದ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ಸಿಕ್ಕ ತಕ್ಷಣ, ಪೊಲೀಸರು ಮತ್ತು ವೈದ್ಯಕೀಯ ತಂಡಗಳು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ತೆಂಕಾಸಿಯಲ್ಲಿರುವ ಸರ್ಕಾರಿ ಜಿಲ್ಲಾ ಕೇಂದ್ರ ಆಸ್ಪತ್ರೆಗೆ ಸ್ಥಳಾಂತರಿಸಿದರು. ಎರಡು ಬಸ್ಗಳಲ್ಲಿ ಎಷ್ಟು ಪ್ರಯಾಣಿಕರಿದ್ದರು ಎಂಬುದನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
https://www.newsics.com/2025/11/24/a-young-man-took-a-bbm-student-to-a-room-and-murdered-her/