Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಚೆನ್ನೈ: ಈಶಾನ್ಯ ಮಾನ್ಸೂನ್ ಹೆಚ್ಚಿದ ಕಾರಣದಿಂದಾಗಿ ಕಳೆದ 24 ಗಂಟೆಗಳಿಂದ ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ. ಮಲಕ್ಕಾ ಜಲಸಂಧಿಯ ಮೇಲೆ ಕಡಿಮೆ ಒತ್ತಡದ ಪ್ರದೇಶವಿದ್ದು, ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಇದು ಚಂಡಮಾರುತವಾಗಿ ಬದಲಾಗಬಹುದು. ಈ ಚಂಡಮಾರುತಕ್ಕೆ ಸೆನ್ಯಾರ್ ಎಂದು ಹೆಸರಿಡಲಾಗಿದೆ.
ನವೆಂಬರ್ 27ರವರೆಗೆ ತಮಿಳುನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ನವೆಂಬರ್ 28ರಿಂದ 30 ರವರೆಗೆ ಮತ್ತೆ ಮಳೆಯ ಆರ್ಭಟ ಹೆಚ್ಚಾಗುವ ಸಾಧ್ಯತೆಯಿರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೇರಳ ಮತ್ತು ಮಾಹೆಯಲ್ಲಿ ನವೆಂಬರ್ 26ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಈ ಚಂಡಮಾರುತಕ್ಕೆ ಸೆನ್ಯಾರ್ ಚಂಡಮಾರುತ ಎಂದು ಹೆಸರಿಸಲಾಗಿದೆ. ನವೆಂಬರ್ 29 ಮತ್ತು 30ರ ನಡುವೆ ಈ ಚಂಡಮಾರುತವು ತಮಿಳುನಾಡಿನ ರಾಜಧಾನಿ ಚೆನ್ನೈನ ಕರಾವಳಿಯ ಹತ್ತಿರ ಚಲಿಸಬಹುದು ಎಂದು ಐಎಂಡಿ ಮುನ್ಸೂಚನೆ ನೀಡಿದೆ.