Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > DK Shivakumar politics ಸಿಎಂ ಪಟ್ಟವೇರಲು ಡಿಕೆ ಶತಪ್ರಯತ್ನ, ಕೆ‌.ಸಿ. ವೇಣುಗೋಪಾಲ್ ಜತೆ ಚರ್ಚೆ, ವರಿಷ್ಠರ ಮೇಲೆ ಭಾರೀ ಒತ್ತಡ
ದೇಶಪ್ರಮುಖ

DK Shivakumar politics ಸಿಎಂ ಪಟ್ಟವೇರಲು ಡಿಕೆ ಶತಪ್ರಯತ್ನ, ಕೆ‌.ಸಿ. ವೇಣುಗೋಪಾಲ್ ಜತೆ ಚರ್ಚೆ, ವರಿಷ್ಠರ ಮೇಲೆ ಭಾರೀ ಒತ್ತಡ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ರಾಜಕಾರಣ ರಂಗೇರಿದೆ. ಮುಖ್ಯಮಂತ್ರಿ ಬದಲಾವಣೆ, ಅಧಿಕಾರ ಹಸ್ತಾಂತರ ವಿಚಾರದಲ್ಲಿ ಕಳೆದ ಕೆಲ ದಿನಗಳಿಂದ ಜಟಾಪಟಿಗಳು ನಡೆಯುತ್ತಿವೆ.

ಮಲ್ಲಿಕಾರ್ಜುನ ಖರ್ಗೆ ರಾಜ್ಯಕ್ಕೆ ಬೇಟಿ ನೀಡಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಬಹುತೇಕ ನಾಯಕರು ಭೇಟಿಯಾಗಿ ಇದೇ ವಿಚಾರ ಚರ್ಚಿಸಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ಬಳಿ ಸ್ಪಷ್ಟತೆ ಬಯಸಿದ್ದ ಡಿಕೆ ಶಿವಕುಮಾರ್ ಸೋಮವಾರ ತಡ ರಾತ್ರಿ ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಭೇಟಿಯಾಗಲು ಮುಂದಾಗಿದ್ದಾರೆ. ಬೆಂಗಳೂರಿಗೆ ಆಗಮಿಸುತ್ತಿರುವ ವೇಣುಗೋಪಾಲ್ ಭೇಟಿಯಾಗಿ ಕ್ಲಾರಿಟಿ ಪಡೆಯಲು ಹಾಗೂ ತಮ್ಮ ಸ್ಪಷ್ಟ ನಿಲುವನ್ನು ಹೈಕಮಾಂಡ್‌ಗೆ ತಿಳಿಸಲು ಮುಂದಾಗಿದ್ದಾರೆ.

ವಿಮಾನ ನಿಲ್ದಾಣದಲ್ಲೇ ವೇಣುಗೋಪಾಲ್ ಭೇಟಿ?
ದೆಹಲಿಯಿಂದ ಬೆಂಗಳೂರಿಗೆ ರಾತ್ರಿ 11ರ ಸುಮಾರಿಗೆ ಕೆಂಪೇಗೌಡ ಏರ್‌ಪೋರ್ಟ್‌ಗೆ ಆಗಮಿಸಿದ ಕೆಸಿ ವೇಣುಗೋಪಾಲ್ ಅವರನ್ನು ಏರ್‌ಪೋರ್ಟ್‌‌ನಲ್ಲೇ ಭೇಟಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಬಳಿಕ ವೇಣುಗೋಪಾಲ್ ಏರ್‌ಪೋರ್ಟ್‌ನಿಂದ ತಾಜ್ ಹೊಟೇಲ್‌ಗೆ ಆಗಮಿಸಿದ್ದು, ಮಂಗಳವಾರ ಬೆಳಗ್ಗೆ 7 ಗಂಟೆಗೆ ಕೊಚ್ಚಿಗೆ ಪ್ರಯಾಣ ಬೆಳೆಸಲಿದ್ದಾರೆ.

ಪ್ರತ್ಯೇಕವಾಗಿ ಮಾತನಾಡಲು ಕೆಸಿ ವೇಣುಗೋಪಾಲ್‌ಗೆ ಸಮಯವಿಲ್ಲ. ಇದೇ ಕಾರಣದಿಂದ ವಿಮಾನ ನಿಲ್ದಾಣಕ್ಕೆ ತೆರಳಿ ಕೆಸಿ ವೇಣುಗೋಪಾಲ್ ಬರಮಾಡಿಕೊಂಡು ಮಾತುಕತೆ ನಡೆಸಲು ಡಿಕೆ ಶಿವಕುಮಾರ್ ಮುಂದಾಗಿದ್ದಾರೆ.

ಈಗಾಗಲೇ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸ್ಪಷ್ಟವಾಗಿ ತಮ್ಮ ನಿರ್ಧಾರವನ್ನು ಡಿಕೆ ಸಹೋದರರು ತಿಳಿಸಿದ್ದಾರೆ. ಇದರ ಬೆನ್ನಲ್ಲೇ ಡಿಕೆಶಿ ಕೆ.ಸಿ.ವೇಣುಗೋಪಾಲ್ ಭೇಟಿ ತೀವ್ರ ಕುತೂಹಲ ಕೆರಳಿಸಿದೆ.

ಈ ಮಧ್ಯೆ, ಡಿಕೆ ಶಿವಕುಮಾರ್ ಪರ ಬ್ಯಾಟಿಂಗ್ ಮಾಡಲು ದೆಹಲಿಗೆ ತೆರಳಿರುವ ಶಾಸಕರಾದ ಬಾಲಕೃಷ್ಣ, ಬಸವರಾಜ್ ಶಿವಗಂಗಾ, ಮಹೇಂದ್ರ ತಮ್ಮಣ್ಣನವರ್, ಬಾಬಾ ಸಾಹೇಬ್ ಪಾಟೀಲ್, ಉದಯ್ ಕದಲೂರು, ಇಕ್ಬಾಲ್ ಹುಸೇನ್, ಶಾಸಕಿ ನಯನ ಮೋಟಮ್ಮ ವರಿಷ್ಠರನ್ನು ಭೇಟಿಯಾಗಲು ಸಜ್ಜಾಗಿದ್ದಾರೆ.

ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಂಗಳೂರಿನ ಸದಾವಶಿವನಗರದ ನಿವಾಸದಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಸುಮಾರು 1 ಗಂಟೆ ಕಾಲ ಮಾತುಕತೆ ನಡೆದಿದೆ.

ಈ ವೇಳೆ ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಮಲ್ಲಿಕಾರ್ಜುನ ಖರ್ಗೆ ಬೇಸರ ವ್ಯಕ್ತಪಡಿಸಿರುವ ಮಾಹಿತಿಯೂ ಬಯಲಾಗಿತ್ತು. ಪಕ್ಷದ ಚೌಕಟ್ಟಿನೊಳಗೆ ಮಾತನಾಡುವುದು ಬಿಟ್ಟು, ಮಾಧ್ಯಮಗಳ ಮುಂದೆ ಹೇಳಿಕೆ ನೀಡಿ ಅನಗತ್ಯ ಗೊಂದಲ ಸೃಷ್ಟಿಸುವ ಪ್ರಯತ್ನಗಳು ಉತ್ತಮವಲ್ಲ ಎಂದು ಖರ್ಗೆ ಅಭಿಪ್ರಾಯಪಟ್ಟಿದ್ದಾರೆ ಎಂದು ವರದಿಯಾಗಿದೆ.

Richest MLA DK ಅತಿ ಶ್ರೀಮಂತ ಶಾಸಕ ಖ್ಯಾತಿಯ ಡಿಸಿಎಂ ಡಿಕೆ ಖಜಾನೆ ತೂಕ ಎಷ್ಟು?

ಸಿಎಂ ಪಟ್ಟದ ಫೈಟ್ ನಡುವೆ ಸ್ಫೋಟಕ ಭವಿಷ್ಯ ನುಡಿದ ಹುಲಿಗೆಮ್ಮ ಜೋಗತಿ

TAGGED:DCM DK Shivakumar puts heavy pressure on Congress leaders
Share This Article
Facebook Twitter Copy Link Print
Previous Article Richest MLA DK ಅತಿ ಶ್ರೀಮಂತ ಶಾಸಕ ಖ್ಯಾತಿಯ ಡಿಸಿಎಂ ಡಿಕೆ ಖಜಾನೆ ತೂಕ ಎಷ್ಟು?
Next Article Teacher arrest ಹೈಸ್ಕೂಲ್ ವಿದ್ಯಾರ್ಥಿನಿಗೆ ಲೈಂ*ಗಿಕ ದೌರ್ಜನ್ಯ: ಶಿಕ್ಷಕ ಅರೆಸ್ಟ್

Popular Posts

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

You Might Also Like

ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read
ಪ್ರಮುಖCrimeದೇಶ

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?