Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಚಿತ್ರದುರ್ಗ : ಚಿತ್ರದುರ್ಗದ ಮುರುಘಾ ಶ್ರೀ ವಿರುದ್ಧ ದಾಖಲಾಗಿದ್ದ ಪೋಕ್ಸೋ ಕೇಸ್ ಗೆ ಸಂಬಂಧಿಸಿದಂತೆ ಚಿತ್ರದುರ್ಗದ ಎರಡನೇ ಸೆಷನ್ಸ್ ಹಾಗೂ ಜಿಲ್ಲಾ ಕೋರ್ಟ್ ನಿರ್ದೋಷಿ ಅಂತ ತೀರ್ಪು ಪ್ರಕಟಿಸಿದೆ.
ಚಿತ್ರದುರ್ಗದ ಮುರುಘಾಶ್ರೀ ವಿರುದ್ಧ 2022ರ ಆ.26 ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪೋಕ್ಸೊ ಕೇಸ್ ದಾಖಲಾಗಿದ್ದು, ಮುರುಘಾ ಮಠದ ಹಾಸ್ಟೆಲ್‌ನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರಿಂದ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಎ1 ಮುರುಘಾಶ್ರೀ, ಎ2 ಲೇಡಿ ವಾರ್ಡನ್ ರಶ್ಮಿ, ಎ3 ಬಸವಾದಿತ್ಯ, ಎ4 ಮ್ಯಾನೇಜರ್ ಪರಮಶಿವಯ್ಯ, ಎ5 ವಕೀಲ ಗಂಗಾಧರಯ್ಯ ವಿರುದ್ಧ ಕೇಸ್ ದಾಖಲಾಗಿತ್ತು.
2022ರಲ್ಲಿ ಎ1 ಮುರುಘಾಶ್ರೀಗಳನ್ನು ಪೊಲೀಸರು ಬಂಧಿಸಿದ್ರು. ಬಳಿಕ ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಮುರುಘಾಶ್ರೀ ವಿರುದ್ಧ 2022ರ ಅ.13 ರಂದು ಮಠದ ಅಡುಗೆ ಸಹಾಯಕಿ ಮತ್ತೊಂದು ದೂರು ನೀಡಿದ್ರು. ತನ್ನ ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ಮುರುಘಾ ಶ್ರೀ ಲೈಂಗಿಕ ಕಿರುಕುಳವೆಸಗಿದ್ದಾರೆ ಎಂದು ಆರೋಪಿಸಿದ್ರು.