Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಕುರಿತು ಭಾರೀ ಚರ್ಚೆ ನಡೆಯುತ್ತಿದ್ದು ಅದರಲ್ಲೂ ಕಾಂಗ್ರೆಸ್ ಪಕ್ಷದಲ್ಲಿಯೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬಣದ ಮಧ್ಯ ಕುರ್ಚಿಗಾಗಿ ಬಿಗ್ ಫೈಟ್ ನಡೆಯುತ್ತಿದೆ.
ಈ ಮಧ್ಯೆ, ಪ್ಲೀಸ್ ವೇಯ್ಟ್ ಐ ವಿಲ್ ಕಾಲ್ ಯು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ರಾಹುಲ್ ಗಾಂಧಿ ಸಂದೇಶ ಕಳುಹಿಸಿದ್ದಾರೆ ಎನ್ನಲಾಗಿದೆ.
ರಾಹುಲ್ ಗಾಂಧಿ ಜತೆ ನಿರಂತರ ಸಂಪರ್ಕದಲ್ಲಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮುಂದಿನ ಸನ್ನಿವೇಶದ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.
ಸಚಿವ ಸತೀಶ್ ಜಾರಕಿಹೊಳಿ ಮನೆಯಲ್ಲಿ ಬುಧವಾರ ಸಚಿವರಿಗೆ ಡಿನ್ನರ್ ಪಾರ್ಟಿಯನ್ನು ಹಮ್ಮಿಕೊಳ್ಳಲಾಗಿತ್ತು. ಆದರೆ ನಿನ್ನೆ ಸಂಜೆ ಖಾಸಗಿ ಹೋಟೆಲ್‌ನಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಮತ್ತು ಸತೀಶ್ ಮುಖಾಮುಖಿ ಭೇಟಿಯಾದ ಬಳಿಕ ಈ ಡಿನ್ನರ್ ಪಾರ್ಟಿಯನ್ನು ರದ್ದು ಮಾಡಲಾಗಿದೆ ಎನ್ನಲಾಗಿದೆ.
ಬಿಹಾರ ವಿಧಾನಸಭೆಯಲ್ಲಿ ಹೀನಾಯ ಸೋಲಿನಿಂದ ಮನಸ್ಸು ಕೆಡಿಸಿಕೊಂಡಿರುವ ರಾಹುಲ್ ಗಾಂಧಿ ತಮ್ಮ ಆಪ್ತರ ಬಳಿ ಕರ್ನಾಟಕದ ರಾಜಕೀಯ ಬೆಳವಣಿಗೆ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಸದ್ಯದ ಬೆಳವಣಿಗೆಯಲ್ಲಿ ರಾಹುಲ್ ಗಾಂಧಿ ಮಧ್ಯಪ್ರವೇಶ ಮಾಡಿ ಪರಿಸ್ಥಿತಿ ತಿಳಿಗೊಳಿಸಿದರೆ ಮಾತ್ರ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಸಿಎಂ ಕುರ್ಚಿ ಬಿಕ್ಕಟ್ಟು ತಿಳಿಯಾಗಲಿದೆ.