Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ಸಮರ ಜೋರಾಗಿ ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ನಡುವಿನ ಗುದ್ದಾಟ ಹೈಕಮಾಂಡ್ ಅಂಗಳದಲ್ಲಿ ಭಾರೀ ಸದ್ದು ಮಾಡುತ್ತಿದೆ. ಇದೀಗ ರಾಹುಲ್ ಗಾಂಧಿ ಅವರು ನೇರವಾಗಿ ಡಿಕೆಶಿಗೆ ಸ್ವಲ್ಪ ಕಾಯಿರಿ, ನಾನು ನಿಮ್ಮ ಜೊತೆ ಮಾತನಾಡುತ್ತೇನೆ ಎಂದು ವಾಟ್ಸಾಫ್ ನಲ್ಲಿ ಮೇಸೇಜ್ ಮಾಡಿದ್ದಾರೆ.
ಈಗ ಮತ್ತೆ ಸಿಎಂ ಸ್ಥಾನಕ್ಕೇರಲು ಡಿಸಿಎಂ ಡಿಕೆಶಿ ಪ್ರಯತ್ನ ಆರಂಭಿಸಿದ್ದಾರೆ. ಇದಕ್ಕಾಗಿ ಕಾಂಗ್ರೆಸ್ ಹೈಕಮ್ಯಾಂಡ್ ಈಗ ತೀರ್ಮಾನ ಕೈಗೊಳ್ಳಬೇಕಾಗಿದೆ. ಈ ವಿಷಯದ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ನೇರವಾಗಿ ಭೇಟಿಯಾಗಲು ಡಿಸಿಎಂ ಡಿಕೆಶಿ ನಿರ್ಧರಿಸಿದ್ದಾರೆ
. ರಾಹುಲ್ ಗಾಂಧಿ ಅವರ ಭೇಟಿಗೆ ಅಪಾಯಿಂಟ್ ಮೆಂಟ್ ಕೂಡ ಕೇಳಿದ್ದಾರೆ. ಇದರಿಂದಾಗಿ ರಾಹುಲ್ ಗಾಂಧಿ ವಾಟ್ಸಾಫ್ ನಲ್ಲೇ ಡಿಕೆಶಿ ಗೆ ಮೇಸೇಜ್ ಮಾಡಿದ್ದಾರೆ. ಸ್ವಲ್ಪ ಕಾಯಿರಿ. ನಾನು ನಿಮ್ಮ ಜೊತೆ ಮಾತನಾಡುತ್ತೇನೆ ಎಂದು ರಾಹುಲ್ ಗಾಂಧಿ, ಡಿಕೆಶಿಗೆ ಮೇಸೇಜ್ ಮಾಡಿದ್ದಾರೆ.