Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ದಕ್ಷಿಣ ಗೋವಾ ಜಿಲ್ಲೆಯ ಶ್ರೀ ಸಂಸ್ಥಾನ ಗೋಕರ್ಣ ಜೀವೋತ್ತಮ ಮಠದಲ್ಲಿ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರು 77 ಅಡಿ ಎತ್ತರದ ಶ್ರೀರಾಮನ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.
ಪ್ರಧಾನಿಯವರು ಮಧ್ಯಾಹ್ನ 3.45 ಕ್ಕೆ ಸ್ಥಳಕ್ಕೆ ಆಗಮಿಸಲಿದ್ದಾರೆ. ಮಠದ ಆವರಣದಲ್ಲಿ ವಿಶೇಷ ಹೆಲಿಪ್ಯಾಡ್ ನಿರ್ಮಿಸಲಾಗಿದೆ ಎಂದು ಅದರ ಕೇಂದ್ರ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಡೆಂಪೊ ತಿಳಿಸಿದ್ದಾರೆ. ಶ್ರೀರಾಮನ 77 ಅಡಿ ಪ್ರತಿಮೆಯನ್ನು ಪ್ರಧಾನಿಯವರ ಕೈಯಿಂದ ಅನಾವರಣಗೊಳಿಸಲಾಗುವುದು ಎಂದು ಅವರು ಹೇಳಿದರು.
ಗುಜರಾತ್ನಲ್ಲಿ ಏಕತಾ ಪ್ರತಿಮೆಯನ್ನು ವಿನ್ಯಾಸಗೊಳಿಸಿದ ಶಿಲ್ಪಿ ರಾಮ್ ಸುತಾರ್ ಅವರು ಶ್ರೀ ರಾಮನ ಪ್ರತಿಮೆಯನ್ನು ನಿರ್ಮಿಸಿದ್ದಾರೆ ಎಂದು ಗೋವಾ ಲೋಕೋಪಯೋಗಿ ಇಲಾಖೆ ಸಚಿವ ದಿಗಂಬರ ಕಾಮತ್ ಹೇಳಿದ್ದಾರೆ.
https://www.newsics.com/2025/11/27/leopard-sighted-again-in-haveri-locals-in-panic/