Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
- newsics.com
ಬೆಂಗಳೂರು : ದಿತ್ವಾ ಚಂಡಮಾರುತದ ಹಿನ್ನಲೆ ರಾಜ್ಯದಲ್ಲಿ ಮುಂದಿನ 4 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ಹಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕ, ತಮಿಳುನಾಡು, ಕೇರಳ ಹಾಗೂ ಆಂಧ್ರಪ್ರದೇಶದ ಕರಾವಳಿ ಪ್ರದೇಶಗಳಲ್ಲಿ ಡಿಸೆಂಬರ್ 1ರಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ದಿತ್ವಾ ಚಂಡಮಾರುತ ಉತ್ತರ ತಮಿಳುನಾಡು ಕರಾವಳಿ ತೀರ ಭಾಗ ಹಾಗೂ ದಕ್ಷಿಣ ಆಂಧ್ರದನೈಋುತ್ಯ ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿದ್ದು ಮುಂದಿನ 12 ಗಂಟೆಗಳಲ್ಲಿ ಇದು ಚಂಡಮಾರುತವಾಗಿ ಪರಿವರ್ತನೆಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಲಘು ಅಥವಾ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.