Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಉಡುಪಿಗೆ ಇಂದು ಪ್ರಧಾನಿ ಮೋದಿ ಆಗಮನ: ಏನೇನು ಕಾರ್ಯಕ್ರಮ?
ದೇಶಕರ್ನಾಟಕ

ಉಡುಪಿಗೆ ಇಂದು ಪ್ರಧಾನಿ ಮೋದಿ ಆಗಮನ: ಏನೇನು ಕಾರ್ಯಕ್ರಮ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಉಡುಪಿ :  ಪ್ರಧಾನಿ ನರೇಂದ್ರ ಮೋದಿ ಇಂದು ಉಡುಪಿಗೆ ಆಗಮಿಸಲಿದ್ದು, 40 ನಿಮಿಷ ಮುಂಚಿತವಾಗಿಯೇ ಉಡುಪಿಗೆ ಭೇಟಿ ನೀಡಲಿದ್ದಾರೆ.ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಶುಕ್ರವಾರ ಬೆಳಗ್ಗೆ 11 ಗಂಟೆಯಿಂದ 11.30 ರೋಡ್ ಶೋನಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ.

ಕೃಷ್ಣಮಠದ ವಿಶ್ವಪರ್ಯಾಯ ನಡೆಯುತ್ತಿದ್ದು, ಇದರ ಭಾಗವಾಗಿ ಲಕ್ಷ ಕಂಠ ಗೀತಾ ಪರಾಯಣ ಹಮ್ಮಿಕೊಳ್ಳಲಾಗಿದೆ. ಅಂದರೆ ಒಂದು ಲಕ್ಷಕ್ಕೂ ಹೆಚ್ಚು ಜನ ಭಕ್ತರು ಇಂದು ಕೃಷ್ಣಮಠದ ಕಾರ್ಯಕ್ರಮದಲ್ಲಿ ಭಗವದ್ಗೀತೆ ಪಠಿಸಲಿದ್ದಾರೆ.

ಇದೇ ಐತಿಹಾಸಿಕ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಸಾಕ್ಷಿ ಆಗಲಿದ್ದಾರೆ. ಸ್ವತಃ ಮೋದಿಯೇ ಭಗವದ್ಗೀತೆಯ 15 ನೇ ಅಧ್ಯಾಯದ ಶ್ಲೋಕಗಳನ್ನು ಪಠಿಸಲಿದ್ದಾರೆ. ಗೀತೆಯಲ್ಲಿ ಹೆಚ್ಚಿನ ಮಹತ್ವ ಹೊಂದಿರುವ 15 ನೇ ಅಧ್ಯಾಯದ ಕೊನೆಯ 10 ಶ್ಲೋಕಗಳನ್ನು ಪಠಿಸಲಿದ್ದಾರೆ. ಇದಕ್ಕೆ ಬೇಕಾದ ಸಿದ್ಧತೆ ಅಂತಿಮವಾಗಿದೆ. ಇನ್ನು ಇದೇ ವೇಳೆ ಅನಂತ ಪದ್ಮನಾಭ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.

ಸ್ವರ್ಣ ಲೇಪಿತ ತೀರ್ಥ ಮಂಟಪವನ್ನು ಮೋದಿ ಉದ್ಘಾಟಿಸಲಿದ್ದಾರೆ. ಪುತ್ತಿಗೆ ಸ್ವಾಮೀಜಿಯವರ ಸನ್ಯಾಸ ಜೀವನದ 50ನೇ ವರ್ಷ ಪೂರ್ಣಗೊಂಡ ಹಿನ್ನೆಲೆ 2 ಕೋಟಿ ರೂ. ವೆಚ್ಚದಲ್ಲಿ ತೀರ್ಥ ಮಂಟಪಕ್ಕೆ ಸ್ವರ್ಣ ಲೇಪನ ಮಾಡಲಾಗಿದ್ದು, ಇದು ಇವತ್ತು ಉದ್ಘಾಟನೆಯಾಗಲಿದೆ. ನಂತರ ಕನಕ ನವಗ್ರಹ ಕಿಂಡಿಯ ಮೂಲಕ ಕೃಷ್ಣ ದರ್ಶನ ಮಾಡಲಿದ್ದಾರೆ.

ಕಾರವಾರ ಸಮೀಪವಿರುವ ಗೋವಾ ರಾಜ್ಯಕ್ಕೆ ಸೇರಿದ ಕಾಣಕೋಣ ಬಳಿ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ಆವರಣದಲ್ಲಿ ನಿರ್ಮಿಸಿರುವ ‌77 ಅಡಿ ಎತ್ತರದ ಶ್ರೀರಾಮನ ಕಂಚಿನ ಮೂರ್ತಿಯನ್ನು ಪ್ರಧಾನಿ ನರೇಂದ್ರ ಮೋದಿ ಮಧ್ಯಾಹ್ನ 3.45ಕ್ಕೆ ಅನಾವರಣ ಮಾಡುವರು.

ಬಂದೋಬಸ್ತ್​​ಗೆ 3000ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. 10 ಮಂದಿ ಎಸ್​ಪಿ, 27 DySPಗಳು, 49 ಇನ್ಸ್​​ಪೆಕ್ಟರ್​ಗಳು, 127 PSI, 232 ASI, 1608 ಪಿಸಿಗಳು​, 39 ಮಹಿಳಾ ಸಿಬ್ಬಂದಿ, 6 KSRP ತುಕಡಿ, 6 ಕ್ಯೂಆರ್‌ಟಿ ತಂಡಗಳನ್ನ ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಇನ್ನು ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಮಾರ್ಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ರೋಡ್ ಶೋ ಮಾರ್ಗದುದ್ದಕ್ಕೂ ಪೊಲೀಸರಿಂದ ನಿರಂತರ ತಪಾಸಣೆ ನಡೆಸಲಾಗಿದೆ.

https://www.newsics.com/2025/11/28/union-minister-hd-kumaraswamy-admitted-to-chennai-apollo-hospital-for-eye-treatment/

TAGGED:#PrimeMinister #NarendraModi #arrival #Udupi #program
Share This Article
Facebook Twitter Copy Link Print
Previous Article ಚೆನ್ನೈ ಅಪೋಲೋ ಆಸ್ಪತ್ರೆಗೆ ದಾಖಲಾದ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ
Next Article ಇನ್ಮುಂದೆ ಬೆಂಗಳೂರಿನಲ್ಲಿ ಕಸಕ್ಕೆ ಬೆಂಕಿ ಹಚ್ಚಿದರೆ ಜೈಲೂಟ ಪಿಕ್ಸ್

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?