Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ನವದೆಹಲಿ:ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಡಿಸೆಂಬರ್ 4-5 ರಂದು 23 ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಭೇಟಿ ನೀಡಲಿದ್ದಾರೆ
ಪ್ರಧಾನಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಈ ಭೇಟಿ ನಡೆಯಲಿದ್ದು, ಉಭಯ ನಾಯಕರು ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ಬಗ್ಗೆ ಚರ್ಚಿಸಲಿದ್ದಾರೆ. ಇನ್ನು, ಪುಟಿನ್ ಭೇಟಿ ವೇಳೆ ರಾಷ್ಟ್ರಪತಿ ಔತಣಕೂಟ ನೀಡಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ಡಿಸೆಂಬರ್ 4ರಂದು ಭಾರತಕ್ಕೆ ಆಗಮಿಸಲಿರುವ ವ್ಲಾಡಿಮಿರ್ ಪುಟಿನ್ ಡಿಸೆಂಬರ್ 5ರವರೆಗೆ ಎರಡು ದಿನಗಳ ಕಾಲ ಭಾರತದಲ್ಲಿರಲಿದ್ದಾರೆ. ಭಾರತ ಭೇಟಿ ವೇಳೆ ಪುಟಿನ್ ಹಾಗೂ ಪ್ರಧಾನಿ ಮೋದಿ ರಾಷ್ಟ್ರಪದಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲಿದ್ದಾರೆ.