Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಚೆನ್ನೈ: ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಕಣ್ಣಿನ ಚಿಕಿತ್ಸೆಗಾಗಿ ಚೆನ್ನೈನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕುಮಾರಸ್ವಾಮಿಗೆ ವೈದ್ಯರು ಚಿಕಿತ್ಸೆ ಆರಂಭಿಸಿದ್ದಾರೆ. ಕಣ್ಣಿನ ಸಮಸ್ಯೆಯಿಂದ ಆಸ್ಪತ್ರೆ ದಾಖಲಾಗಿರುವ ಕುಮಾರಸ್ವಾಮಿ ರೂಟಿನ್ ಚೆಕಪ್ ಮುಗಿಸಿ ನಾಳೆ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ. ಹೆಚ್‌ಡಿ ಕುಮಾರಸ್ವಾಮಿ ಆರೋಗ್ಯವಾಗಿದ್ದು, ರೂಟಿನ್ ಚೆಕ್ಅಪ್ ಮುಗಿಸಿ ನಾಳೆಯೇ ದಿಲ್ಲಿಗೆ ವಾಪಾಸ್ಸಾಗುವ ಸಾಧ್ಯತೆ ಇದೆ.
ಹೆಚ್‌ಡಿ ಕುಮಾರಸ್ವಾಮಿ ಕಳೆದ ಹಲವು ತಿಂಗಳಿನಿಂದ ಆರೋಗ್ಯ ಸಮಸ್ಯೆ ಎದುರಿಸಿದ್ದರು. ಇದಕ್ಕಾಗಿ ಸತತ ಚಿಕಿತ್ಸೆ ಪಡೆದಿದ್ದಾರೆ. ಇತ್ತೀಚೆಗೆ ಹಾಸನಾಂಬೆ ದರ್ಶನ ಪಡೆದು ತಮ್ಮ ಆರೋಗ್ಯದ ಕುರಿತು ಮಾತನಾಡಿದ್ದರು. ಕಳೆದ ಕೆಲ ತಿಂಗಳಿನಿಂದ ಬೇರೆ ರೀತಿಯ ಸಮಸ್ಯೆ ಎದುರಿಸಿದ್ದೇನೆ. ದೇವರು ಮತ್ತೆ ಜನಪರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಶಕ್ತಿ ನೀಡಲಿ ಎಂದಿದ್ದರು.
ಕಳೆದ ಹಲವು ತಿಂಗಳು ಹೆಚ್‌ಡಿ ಕುಮಾರಸ್ವಾಮಿ ಆರೋಗ್ಯ ಸಮಸ್ಯೆ ಎದುರಿಸಿದ್ದರು. ಆದರೆ ಚಿಕಿತ್ಸೆ ಬಳಿಕ ಸಂಪೂರ್ಣವಾಗಿ ಚೇತರಿಸಿಕೊಂಡ ಕುಮಾರಸ್ವಾಮಿ ಜೆಡಿಎಸ್ ಸಭೆ ನಡೆಸಿದ್ದರು. ಇಷ್ಟೇ ಅಲ್ಲ ಪಕ್ಷ ಸಂಘಟನೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಜೆಡಿಎಸ್ ವಿಶೇಷ ಕಾರ್ಯಕ್ರಮದಲ್ಲಿ ನಾಯಕರಿಗೆ ಕ್ಷೇತ್ರಗಳಲ್ಲಿ ಕೆಲಸ ಮಾಡಲು ಸೂಚಿಸಿದ್ದರು. ಹಲವು ತಿಂಗಳು ಸಾರ್ವಜನಿಕ ಕಾರ್ಯಕ್ರಮಗಳಿಂದ ದೂರವಿಲ್ಲ ಹೆಚ್‌ಡಿ ಕುಮಾರಸ್ವಾಮಿ ಇದೀಗ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿದ್ದಾರೆ.