Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು : ಡಿಸೆಂಬರ್ 21, 2025 ರಂದು ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳಾದ ಯತೀಶ್ ಆರ್ ಅವರು ತಿಳಿಸಿದರು.
ನಗರದ ಬನಶಂಕರಿಯಲ್ಲಿರುವ ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಡಿಸೆಂಬರ್ 21, 2025 ರಂದು ನಡೆಯುವ ಪಲ್ಸ್ ಪೋಲಿಯೋ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸುಮಾರು 782 ಬೂತ್ ಗಳಲ್ಲಿ, 39 ಟ್ರಾನಿಟ್ಸ್ ಟೀಂ ಗಳಲ್ಲಿ ಹಾಗೂ 113 ಮೊಬೈಲ್ ಟೀಂ ಗಳಲ್ಲಿ ಪಲ್ಸ್ ಪೋಲಿಯೋ ಲಸಿಕೆಯನ್ನು ಹಾಕಲಾಗುತ್ತದೆ. ಒಟ್ಟು 3128 ಲಸಿಕಾ ಕಾರ್ಯಕರ್ತರು, 157 ಮೇಲ್ವಿಚಾರಕಗಳು ಈ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.
https://www.newsics.com/2025/11/29/72109cm-garam-questions-about-his-promise-at-press-conference/