Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ದಾವಣಗೆರೆ: ನಿವೃತ್ತ ಡಿವೈಎಸ್ಪಿಯೊಬ್ಬರು ತಮ್ಮ ನಿವಾಸದಲ್ಲಿ ರೈಫಲ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶನಿವಾರ ವರದಿಯಾಗಿದೆ.
ನಿವೃತ್ತ ಪೊಲೀಸ್ ಉಪಾಧೀಕ್ಷಕ ಹನುಮಂತಪ್ಪ ವೈ.ತುರಾಯಿ(70 ವರ್ಷ) ಆತ್ಮಹತ್ಯೆ ಮಾಡಿಕೊಂಡವರು. ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ 2014ರಲ್ಲಿ ವಯೋನಿವೃತ್ತಿ ಹೊಂದಿದ್ದ ಹೆಚ್.ವೈ.ತುರಾಯಿ ನಗರದ ನಿಟುವಳ್ಳಿಯ ಖಾದಿ ಗ್ರಾಮೋದ್ಯೋಗ ಕೇಂದ್ರದ ಬಳಿ ಮನೆ ಕಟ್ಟಿಸಿಕೊಂಡು ವಾಸವಾಗಿದ್ದರು.
ಮನೆಯ ಮೇಲ್ಮಹಡಿಲ್ಲಿ ಇವರ ಮಗ ವಾಸವಾಗಿದ್ದು, ತುರಾಯಿ ಕೆಳಗಿನ ಮನೆಯಲ್ಲಿ ಇದ್ದಾಗ ತಮ್ಮದೇ ಹೆಸರಿಗೆ ಲೈಸೆನ್ಸ್ ಹೊಂದಿರುವ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೆಟಿಜೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
https://www.newsics.com/2025/11/29/bariatric-surgery-for-a-young-man-weighing-230-kg/