Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು : ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಇಂದು ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿದ್ದು, ಸುದ್ದಿಗೋಷ್ಠಿ ನಡೆಸಿದ್ದಾರೆ.
ನಮ್ಮಿಬ್ಬರ ನಡುವೆ ಯಾವುದೇ ಗೊಂದಲಗಳಿಲ್ಲ. ಇವತ್ತಿನ ವರೆಗೆ ನಮ್ಮ ಮಧ್ಯೆ ಯಾವುದೇ ಗೊಂದಲಗಳಿರಲಿಲ್ಲ. ಮುಂದೆಯೂ ಇದೇ ತರ ಮುಂದುವರಿಯಲಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಶನಿವಾರ ತಿಳಿಸಿದರು.
ನಾವು ಇಂದು ಮೀಟಿಂಗ್ ಮಾಡಿದ ಉದ್ದೇಶ, ಕೆಲವು ಗೊಂದಲಗಳು ನಿರ್ಮಾಣ ಆಗಿದ್ದೇವೆ. ಒಂದು ತಿಂಗಳಿನಿಂದ ಈ ಗೊಂದಲಗಳು ಶುರುವಾಗಿವೆ. ನಾವು ಇಬ್ಬರು ಮಾತನಾಡಿದ್ದೇವೆ. ನಮ್ಮ ಉದ್ದೇಶ 2028 ರ ಚುನಾವಣೆ, ಸ್ಥಳೀಯ ಸಂಸ್ಥೆ, ತಾಲೂಕು, ಜಿಲ್ಲಾ, ಗ್ರಾಮಪಂಚಾಯಿತಿ ಚುನಾವಣೆ ಬಗ್ಗೆ ಚರ್ಚೆ ಮಾಡಿದ್ದೇವೆ.
2023 ರ ವಿಧಾನಸಭೆ ಚುನಾವಣೆ ಹೇಗೆ ನಾವಿಬ್ಬರು ಚರ್ಚೆ ಮಾಡಿದ್ದೇವೆ ಹಾಗೆಯೇ 2028 ರ ವಿಧಾನಸಭೆ ಚುನಾವಣೆಯಲ್ಲೂ ನಾವು ಒಟ್ಟಿಗೆ ಕೆಲಸ ಮಾಡುತ್ತೇವೆ. ಒಟ್ಟಿಗೆ ಹೋಗುತ್ತೇವೆ. ನಮ್ಮಿಬ್ಬರ ನಡುವೆ ಭಿನ್ನಾಭಿಪ್ರಾಯ ಇಲ್ಲ. ಡಿಸೆಂಬರ್ 8 ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಶುರುವಾಗಲಿದೆ.
ನಮಗೆ ಕರೆ ಮಾಡಿದ್ದ ಹೈಕಮಾಂಡ್ ನಾಯಕರು, ಗೊಂದಲ ತಿಳಿ ಮಾಡುವ ಕೆಲಸ ಮಾಡಿ ಎಂದು ಸೂಚನೆ ನೀಡಿದ್ದರು. ಅದರಂತೆ ನಡೆದುಕೊಳ್ಳುತ್ತೇವೆ. ಹೈಕಮಾಂಡ್ ಸೂಚನೆಯಂತೆಯೇ ನಡೆದುಕೊಳ್ಳುತ್ತೇವೆ ಎಂದು ಈ ಹಿಂದೆಯೂ ಸ್ಪಷ್ಟಪಡಿಸಿದ್ದೆ.
ಬಳಿಕ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ಜನರಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ರಚನೆಯಾಗಿದೆ. ರಾಜಕೀಯವಾಗಿ ನಮ್ಮಿಬ್ಬರದು ಒಂದೇ ತೀರ್ಮಾಣ, ನಮ್ಮಲ್ಲಿ ಯಾವ ಗುಂಪುಗಾರಿಕೆ ಇಲ್ಲ. ಹೈಕಮಾಂಡ್ ಹೇಳಿದಂತೆ ನಡೆಯುತ್ತೇವೆ ಎಂದರು.
https://www.newsics.com/2025/11/29/siddaramaiah-dk-shivakumar-breakfast-meeting/