Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ನಿರ್ದೇಶಕ ರಾಜ್ ನಿಡಿಮೋರು ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಸಮಂತಾ
ಪ್ರಮುಖಮನರಂಜನೆ

ನಿರ್ದೇಶಕ ರಾಜ್ ನಿಡಿಮೋರು ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಸಮಂತಾ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನಾಗಚೈತನ್ಯ ಅವರಿಂದ ವಿಚ್ಛೇದನ ಪಡೆದ ಬಳಿಕ ಒಂಟಿಯಾಗಿದ್ದ ತೆಲುಗು ನಟಿ ಸಮಂತಾ ರುತ್ ಪ್ರಭು ಇದೀಗ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ನಿರ್ದೇಶಕ ರಾಜ್ ನಿಡಿಮೋರು ಜೊತೆ ನಟಿ ಸಮಂತಾ ರುತ್ ಪ್ರಭು ಅವರಿಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಮೂಲಕ ಹಲವು ದಿನಗಳಿಂದ ಹಬ್ಬಿದ್ದ ವದಂತಿಗಳಿಗೆ ತೆರೆ ಎಳೆದಿದ್ದಾರೆ.
ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಇಶಾ ಫೌಂಡೇಶನ್‌ ಆವರಣದಲ್ಲಿರುವ ಲಿಂಗಭೈರವಿ ದೇವಿಯ ದೇವಸ್ಥಾನದಲ್ಲಿ ಇಂದು ಸರಳ ವಿವಾಹವಾಗಿದ್ದಾರೆ. ಸಮಂತಾ ಕೆಂಪು ಸೀರೆ ಧರಿಸಿ ಮಿಂಚಿದ್ರೆ, ರಾಜ್ ನಿಡಿಮೋರು ವೈಟ್ & ವೈಟ್ ಕುರ್ತಾ ಧರಿಸಿ ಸರಳವಾಗಿ ಕಾಣಿಸಿಕೊಂಡಿದ್ದಾರೆ.
ʻಫ್ಯಾಮಿಲಿ ಮ್ಯಾನ್ʼ, ʻಸಿಟಾಡೆಲ್ ಹನಿಬನಿʼ ನಿರ್ದೇಶಕನ ಜೊತೆ ಸಮಂತಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೆಲವು ತಿಂಗಳಿಂದ ಬಹಿರಂಗವಾಗೇ ಈ ಜೋಡಿ ಕಾಣಿಸ್ಕೊಳ್ತಾ ಬಂದಿತ್ತು. ಇದೀಗ ಗುಟ್ಟಾಗಿ ಕಲ್ಯಾಣವಾಗಿರುವ ವಿಚಾರವನ್ನ ಸೋಷಿಯಲ್ ಮೀಡಿಯಾದಲ್ಲಿ ಅಧಿಕೃತ ಘೋಷಣೆ ಮಾಡಿದ್ದಾರೆ. ಮದುವೆಯ ಫೋಟೋಗಳನ್ನ ಸಮಂತಾ ಇನ್‌ಸ್ಟಾದಲ್ಲಿ ಹಂಚಿಕೊಂಡಿದ್ದಾರೆ. ರಾಜ್ ನಿಡಿಮೋರು ಈಗಾಗ್ಲೇ ವಿವಾಹವಾಗಿದ್ದು ಸಮಂತಾ ಜೊತೆ ಅವರಿಗೆ 2ನೇ ವಿವಾಹ.
ಇನ್ನು ಸಮಂತಾ ಖ್ಯಾತ ನಟ ನಾಗಚೈತನ್ಯ ಜೊತೆಗಿನ ಮದುವೆಯಿಂದ ವಿಚ್ಛೇದನ ಪಡೆದುಕೊಂಡಿದ್ದರು. ಇದೀಗ ವೆಬ್‌ಸಿರೀಸ್‌ಗಳ ಮೂಲಕ ಪರಿಚಯವಾದ ಬಹುಕಾಲದ ಒಡನಾಡಿ ರಾಜ್ ಜೊತೆ ಸ್ಯಾಮ್ ಪ್ರೀತಿಯಲ್ಲಿ ಬಿದ್ದಿದ್ದು ಸದ್ದಿಲ್ಲದೇ ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ.

ಲಿಂಗಭೈರವಿ ದೇವಿಯ ಮುಂದೆ ರಾಜ್ ಸಮಂತಾ ಅಧಿಕೃತ ದಾಂಪತ್ಯಕ್ಕೆ ಹೆಜ್ಜೆ ಇಟ್ಟಿದ್ದಾರೆ. ಸರಳ ವಿವಾಹ ಸುಂದರ ಫೋಟೋಗಳನ್ನ ಸಮಂತಾ ರಿಲೀಸ್ ಮಾಡಿದ್ದಾರೆ. ಲಿಂಗಭೈರವಿ ದೇವಿ ಮುಂದೆ ಇಂದು ಬೆಳ್ಳಂಬೆಳಗ್ಗೆ ಹಿಂದೂ ಸಂಪ್ರದಾಯದ ಪ್ರಕಾರ ಸಮಂತಾ ರಾಜ್ ಶಾಸ್ತೋಕ್ತ ಕಲ್ಯಾಣ ನಡೆದಿದೆ.

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮಧ್ಯೆ ಮತ್ತೊಂದು ‘ಬ್ರೇಕ್ಫಾಸ್ಟ್ ಮೀಟಿಂಗ್’

TAGGED:Actress Samantha enters a new life with director Raj Nidimoru
Share This Article
Facebook Twitter Copy Link Print
Previous Article ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮಧ್ಯೆ ಮತ್ತೊಂದು ‘ಬ್ರೇಕ್ಫಾಸ್ಟ್ ಮೀಟಿಂಗ್’
Next Article ಇಡೀ ರಾತ್ರಿ ಕಾಫಿ ತೋಟದಲ್ಲಿ ಒಂಟಿಯಾದ 2 ವರ್ಷದ ಮಗು; ಸಿಕ್ಕಿದ್ದೇಗೆ?

Popular Posts

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?