Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Team India defeated South Africa ಮೊದಲ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಸೋಲಿಸಿದ ಟೀಂ ಇಂಡಿಯಾ
ದೇಶಪ್ರಮುಖವಿದೇಶ

Team India defeated South Africa ಮೊದಲ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಸೋಲಿಸಿದ ಟೀಂ ಇಂಡಿಯಾ

Share
3 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯವನ್ನು ಟೀಂ ಇಂಡಿಯಾ ಯಶಸ್ವಿಯಾಗಿ ಗೆದ್ದಿದೆ.

ಧೋನಿ ತವರಾದ ರಾಂಚಿ ಮೈದಾನದಲ್ಲಿ ನಡೆದ ಉಭಯ ತಂಡಗಳ ಮೊದಲ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಕೊಹ್ಲಿ ಶತಕ ಹಾಗೂ ರೋಹಿತ್ ಮತ್ತು ರಾಹುಲ್ ಅವರ ಅರ್ಧಶತಕದ ನೆರವಿನಿಂದ 349 ರನ್ ಕಲೆಹಾಕಿತು.

ಈ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡ ಕೊನೆಯ ಓವರ್ನಲ್ಲಿ ಆಲೌಟ್ ಆಗುವ ಮೂಲಕ 17 ರನ್ಗಳಿಂದ ಸೋಲೊಪ್ಪಿಕೊಂಡಿತು.

ಆಫ್ರಿಕಾ ಗೆಲುವಿಗಾಗಿ ಆಲ್‌ರೌಂಡರ್ ಕಾರ್ಬಿನ್ ಭಾಷ್ ಏಕಾಂಗಿ ಹೋರಾಟ ನೀಡಿದರಾದರೂ ಅವರಿಗೆ ಕೊನೆಯಲ್ಲಿ ಬೆಂಬಲ ಸಿಗದ ಕಾರಣ ಆಫ್ರಿಕಾ ತಂಡ ಸೋಲಬೇಕಾಯಿತು.

ರೋಹಿತ್ – ಕೊಹ್ಲಿ ಶತಕದ ಜೊತೆಯಾಟ
ರಾಂಚಿಯ ಜೆಎಸ್‌ಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿತು. ಆದರೆ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಆರಂಭಿಕ ಯಶಸ್ವಿ ಜೈಸ್ವಾಲ್ 18 ರನ್‌ಗಳಿಗೆ ಪೆವಿಲಿಯನ್ ಸೇರಿಕೊಂಡರು. ಆದರೆ ಆ ಬಳಿಕ ಎರಡನೇ ವಿಕೆಟ್‌ಗೆ ಜೊತೆಯಾದ ಮಾಜಿ ನಾಯಕರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ತಮ್ಮ ಹೊಡಿಬಡಿ ಆಟದ ಮೂಲಕ ಅಭಿಮಾನಿಗಳನ್ನು ರಂಜಿಸಿದರು. ಒಂದು ತಿಂಗಳ ಹಿಂದೆ ಸಿಡ್ನಿಯಲ್ಲಿ ನಡೆದಿದ್ದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಪಂದ್ಯ ಗೆಲ್ಲುವ ಜೊತೆಯಾಟ ರೂಪಿಸಿದ್ದ ಈ ಇಬ್ಬರು ಅನುಭವಿಗಳು ರಾಂಚಿಯಲ್ಲೂ ಮತ್ತದೇ ಶತಕದ ಪಾಲುದಾರಿಕೆಯನ್ನು ಹಂಚಿಕೊಂಡರು. ಇವರಿಬ್ಬರು 2ನೇ ವಿಕೆಟ್‌ಗೆ 136 ರನ್‌ಗಳ ಜೊತೆಯಾಟ ಕಟ್ಟಿದರು. ಆದರೆ ಅರ್ಧಶತಕ ಬಾರಿಸಿದ ರೋಹಿತ್ ಶರ್ಮಾ ವಿಕೆಟ್ ಒಪ್ಪಿಸುವ ಮೂಲಕ ಈ ಜೊತೆಯಾಟ ಮುರಿದುಬಿತ್ತು.

52ನೇ ಏಕದಿನ ಶತಕ ಬಾರಿಸಿದ ಕೊಹ್ಲಿ
ರೋಹಿತ್ ಔಟಾದ ಬಳಿಕ ತಮ್ಮ ಬ್ಯಾಟಿಂಗ್ ವೇಗವನ್ನು ಕಡಿಮೆ ಮಾಡಿದ ವಿರಾಟ್ ಕೊಹ್ಲಿ ತಾಳ್ಮೆಯ ಇನ್ನಿಂಗ್ಸ್ ಕಟ್ಟಿ ತಮ್ಮ 52ನೇ ಏಕದಿನ ಶತಕವನ್ನು ಪೂರೈಸಿದರು.

ನಾಲ್ಕನೇ ಕ್ರಮಾಂಕದಲ್ಲಿ ಬಂದ ಋತುರಾಜ್ ಹಾಗೂ ವಾಷಿಂಗ್ಟನ್ ಸುಂದರ್ ಬೇಗನೇ ಪೆವಿಲಿಯನ್ ಸೇರಿಕೊಂಡರು. ಇದು ತಂಡದ ರನ್ ವೇಗವನ್ನು ಕಡಿಮೆ ಮಾಡಿತು.

ಆದರೆ 6ನೇ ಕ್ರಮಾಂಕದಲ್ಲಿ ಬಂದ ನಾಯಕ ರಾಹುಲ್, ಕೊಹ್ಲಿಗೆ ಉತ್ತಮ ಸಾಥ್ ನೀಡಿದರು. ಅಂತಿಮವಾಗಿ ಕೊಹ್ಲಿ ಕೇವಲ 120 ಎಸೆತಗಳಲ್ಲಿ 11 ಬೌಂಡರಿ ಮತ್ತು 7 ಸಿಕ್ಸರ್‌ಗಳ ಸಹಿತ 135 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

ನಾಯಕ ಕೆ.ಎಲ್. ರಾಹುಲ್ ಅರ್ಧಶತಕ ಬಾರಿಸಿದರೆ, ರವೀಂದ್ರ ಜಡೇಜಾ ಕೂಡ ಚುರುಕಾದ ಇನ್ನಿಂಗ್ಸ್ ಆಡಿದರು. ದಕ್ಷಿಣ ಆಫ್ರಿಕಾ ಪರ, ಕಾರ್ಬಿನ್ ಬಾಷ್ ಸೇರಿದಂತೆ ನಾಲ್ವರು ವೇಗಿಗಳು ತಲಾ ಎರಡು ವಿಕೆಟ್ ಪಡೆದರು.

ರಾಂಚಿ ಪಿಚ್ನಲ್ಲಿ ಗುರಿ ಬೆನ್ನಟ್ಟುವ ತಂಡಕ್ಕೆ ಹೆಚ್ಚಿನ ನೆರವು ಸಿಗುವ ಕಾರಣ, ದಕ್ಷಿಣ ಆಫ್ರಿಕಾಕ್ಕೆ ರನ್ ಗಳಿಸುವುದು ಅಷ್ಟು ಕಷ್ಟವಲ್ಲ ಎಂಬುದು ಸ್ಪಷ್ಟವಾಗಿತ್ತು. ಆದರೆ ಎರಡನೇ ಓವರ್‌ನಲ್ಲಿ ಮಾರಕ ದಾಳಿ ನಡೆಸಿದ ಹರ್ಷಿತ್ ರಾಣಾ ತಮ್ಮ ಓವರ್‌ನ ಮೊದಲ ಎಸೆತದಲ್ಲೇ ರಯಾನ್ ರಿಕಲ್ಟನ್ ಅವರನ್ನು ಔಟ್ ಮಾಡಿದರೆ, ಮೂರನೇ ಎಸೆತದಲ್ಲಿ ಕ್ವಿಂಟನ್ ಡಿ ಕಾಕ್ ಅವರನ್ನು ಔಟ್ ಮಾಡಿದರು. ಈ ಇಬ್ಬರೂ ಶೂನ್ಯಕ್ಕೆ ಔಟಾದರು. ನಂತರ ಮೂರನೇ ಬ್ರೇಕ್‌ಥ್ರೂ ನೀಡಿದ ಅರ್ಷದೀಪ್, ನಾಯಕ ಐಡೆನ್ ಮಾರ್ಕ್ರಾಮ್ ಅವರನ್ನು ಔಟ್ ಮಾಡಿದರು. ಹೀಗಾಗಿ ಕೇವಲ 11 ರನ್‌ಗಳಿಗೆ ಆಫ್ರಿಕಾದ ಮೂರು ವಿಕೆಟ್‌ಗಳು ಬಿದ್ದವು.

ಇದರ ಹೊರತಾಗಿಯೂ, ದಕ್ಷಿಣ ಆಫ್ರಿಕಾದ ಬ್ಯಾಟ್ಸ್‌ಮನ್‌ಗಳು ಭಾರತಕ್ಕೆ ಸುಲಭವಾಗಿ ಗೆಲುವು ದಕ್ಕದಂತೆ ಮಾಡಿದರು.

Bigg Boss ತೆಲುಗು ಬಿಗ್‌ ಬಾಸ್‌ನಲ್ಲೂ ಹೈಡ್ರಾಮಾ, ಪೇಚಿಗೆ ಸಿಲುಕಿದ ಸಂಜನಾ ಗಲ್ರಾನಿಗೆ ತಪರಾಕಿ, ಬಲವಂತವಾಗಿ ಕ್ಷಮೆ ಕೇಳಿಸಿದ ನಟ ನಾಗಾರ್ಜುನ! ವೀಡಿಯೊ ನೋಡಿ

ಅಂದವೆಲ್ಲ ಮಾಸಿಹೋಗಿ ಏಕಾಏಕಿ ಗುರುತೇ ಸಿಗದಂತಾದ ಖ್ಯಾತ ನಟಿ!

ಮನೆಯಲ್ಲಿ ಇಲಿ ಕಾಟನಾ?;ವಿಷ ಹಾಕುವ ಬದಲು ಈ ರೀತಿ ಮಾಡಿ ಸಾಕು

ಬಿಯರ್ ಬಾಟಲಿಗಾಗಿ ಮುಗಿಬಿದ್ದ ಜನಸಮೂಹ

TAGGED:Team India defeated South Africa in the first ODI
Share This Article
Facebook Twitter Copy Link Print
Previous Article New rules in India ಇನ್ಮೇಲೆ 90 ದಿನಗಳಿಗೊಮ್ಮೆ ಸಿಮ್ ರಿ- ವೆರಿಫಿಕೇಷನ್, ಪ್ರತಿ 6 ಗಂಟೆಗೊಮ್ಮೆ ವಾಟ್ಸ್ಯಾಪ್ ಬ್ರೌಸರ್ ಲಾಗೌಟ್… ಭಾರತದಲ್ಲಿ ಹೊಸ ರೂಲ್ಸ್
Next Article ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?