Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಅಪ್ರಾಪ್ತ ಬಾಲಕಿಯನ್ನ ಕಬ್ಬಿನ ಗದ್ದೆಗೆ ಎಳೆದೊಯ್ದು ಗ್ಯಾಂಗ್ ರೇಪ್ ಎಸಗಿದ ಘಟನೆ ಬೆಳಗಾವಿ ಜಿಲ್ಲೆಯ ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನ.23 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಬಳಿಕ ಆರೋಪಿಗಳು ಬಾಲಕಿ ಕುಟುಂಬಸ್ಥರಿಗೆ ಜೀವ ಬೆದರಿಕೆಯೊಡ್ಡಿದ್ದರು. ಆದರೆ ಅವರು ದೂರು ಕೊಡಲು ಹಿಂದೇಟು ಹಾಕಿದ್ದರು ಎನ್ನಲಾಗಿದೆ.
ಮಣಿಕಂಠ ದಿನ್ನಿಮನಿ ಮತ್ತು ಈರಣ್ಣ ಸಂಕಮ್ಮನವರ ಈ ಕೃತ್ಯ ಎಸಗಿದ ಪಾಪಿಗಳು. ಹಿಟ್ಟು ಮಾಡಿಸಿಕೊಂಡು ಬರಲು ಹಿಟ್ಟಿನ ಗಿರಣಿಗೆ ಹೋಗಿದ್ದ ವೇಲೆ ಆಕೆಯನ್ನ ಕಬ್ಬಿನ ಗದ್ದೆಗೆ ಎಳೆದೊಯ್ದು ಅತ್ಯಾಚಾರ ನಡೆಸಲಾಗಿದೆ. ಮುರಗೋಡ ಠಾಣೆ ಪೊಲೀಸರು ಕೇಸ್ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣದ ವಿಚಾರಣೆಗೆ ಸುಪ್ರೀಂ ತಡೆ