Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರು ಏರ್ಪೋರ್ಟ್‌ಗೆ ಹೊಸ ಪಾರ್ಕಿಂಗ್ ವ್ಯವಸ್ಥೆ;ಡಿಸೆಂಬರ್ 8 ರಿಂದ‌ ಜಾರಿ
ಕರ್ನಾಟಕಪ್ರಮುಖ

ಬೆಂಗಳೂರು ಏರ್ಪೋರ್ಟ್‌ಗೆ ಹೊಸ ಪಾರ್ಕಿಂಗ್ ವ್ಯವಸ್ಥೆ;ಡಿಸೆಂಬರ್ 8 ರಿಂದ‌ ಜಾರಿ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಡಿಸೆಂಬರ್ 8 ರಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪಿಕಪ್ ಮತ್ತು ಡ್ರಾಪ್ ಪ್ರದೇಶದಲ್ಲಿ ಎಂಟು ನಿಮಿಷಗಳ ಉಚಿತ ಸಮಯ ಮೀರಿ ಹೆಚ್ಚು ಹೊತ್ತು ನಿಲ್ಲಿಸುವ ವಾಹನಗಳಿಗೆ ಪ್ರವೇಶ ಶುಲ್ಕ ವಿಧಿಸಲಾಗುತ್ತಿದೆ.
ವಿಮಾನ ನಿಲ್ದಾಣದ ನಿರ್ವಾಹಕರಾದ ಬಿಐಎಎಲ್, ಪ್ರಯಾಣಿಕರ ಸಂಚಾರವನ್ನು ಸುಗಮಗೊಳಿಸಲು, ದಟ್ಟಣೆಯನ್ನು ಕಡಿಮೆ ಮಾಡಲು ಮತ್ತು ಸುರಕ್ಷತೆಯನ್ನು ಸುಧಾರಿಸಲು ಈ ಕ್ರಮ ತೆಗೆದುಕೊಳ್ಳುತ್ತಿರುವುದಾಗಿ ಮಂಗಳವಾರ ಘೋಷಿಸಿದೆ.
“ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ ಶಿಸ್ತನ್ನು ಜಾರಿಗೊಳಿಸುತ್ತಿದ್ದು, ಅನಧಿಕೃತ ಪಾರ್ಕಿಂಗ್ ಅನ್ನು ತಡೆಯಲು ಮತ್ತು ಅನಗತ್ಯವಾಗಿ ಹೆಚ್ಚು ಸಮಯ ನಿಲ್ಲಿಸುವುದನ್ನು ಕಡಿಮೆ ಮಾಡಲು ಲೇನ್ ಪ್ರತ್ಯೇಕತಾ ವ್ಯವಸ್ಥೆಯನ್ನು ಪರಿಚಯಿಸುತ್ತಿದೆ. ಇದು ಕರ್ಬ್‌ಸೈಡ್ ದಟ್ಟಣೆಯನ್ನು ಕಡಿಮೆ ಮಾಡುತ್ತದೆ ಮತ್ತು ಟರ್ಮಿನಲ್‌ಗಳ ಮುಂದೆ ಪಿಕಪ್ ವಲಯದ ದುರುಪಯೋಗವನ್ನು ತಡೆಯುತ್ತದೆ” ಎಂದು ಪ್ರಕಟಣೆ ತಿಳಿಸಿದೆ.
ಹೊಸ ಲೇನ್ ಪ್ರತ್ಯೇಕತಾ ವ್ಯವಸ್ಥೆಯಡಿಯಲ್ಲಿ, T1 ಮತ್ತು T2 ನಲ್ಲಿ ಗೊತ್ತುಪಡಿಸಿದ ಪಿಕಪ್ ಮತ್ತು ಡ್ರಾಪ್ ವಲಯಗಳಿಗೆ ಪ್ರವೇಶವು ಎಲ್ಲಾ ಖಾಸಗಿ ಕಾರುಗಳಿಗೆ (ಬಿಳಿ-ಬೋರ್ಡ್ ವಾಹನಗಳು) ಉಚಿತವಾಗಿರುತ್ತದೆ. ಆದಾಗ್ಯೂ, ನಿಗದಿತ ಸಮಯ ಮಿತಿಯನ್ನು ಮೀರಿ ಹೆಚ್ಚು ನಿಲ್ಲಿಸಿದರೆ ಅಥವಾ ಅವಧಿ ಮೀರಿ ನಿಲ್ಲಿಸಿದ್ದಕ್ಕಾಗಿ ಶುಲ್ಕ ಅನ್ವಯವಾಗುತ್ತವೆ ಎಂದು ಬಿಐಎಲ್ ಹೇಳಿದೆ.
“ವಿಮಾನ ನಿಲ್ದಾಣವು ಎಲ್ಲಾ ಬಳಕೆದಾರರಿಗೆ ವಲಯದ ಉಚಿತ ಬಳಕೆಯನ್ನು ಎಂಟು ನಿಮಿಷಗಳ ಕಾಲ(ಅಂತರರಾಷ್ಟ್ರೀಯ ಮಾನದಂಡಗಳಿಗಿಂತ ಹೆಚ್ಚಿನದು) ನೀಡುತ್ತದೆ, ಅದನ್ನು ಮೀರಿ 8-13 ನಿಮಿಷಗಳವರೆಗೆ ಓವರ್‌ಸ್ಟೇಗೆ 150 ರೂ. ಮತ್ತು 13-18 ನಿಮಿಷಗಳವರೆಗೆ 300 ರೂ. ಶುಲ್ಕ ವಿಧಿಸಲಾಗುತ್ತದೆ. 18 ನಿಮಿಷಗಳಿಗಿಂತ ಹೆಚ್ಚು ಓವರ್‌ಸ್ಟೇಗೆ ಮಾಡಿದರೆ ಹತ್ತಿರದ ಪೊಲೀಸ್ ಠಾಣೆಗೆ ಎಳೆದೊಯ್ಯಯಲಾಗುತ್ತದೆ ಮತ್ತು ಅನ್ವಯವಾಗುವ ದಂಡ ಹಾಗೂ ಟೋವಿಂಗ್ ಶುಲ್ಕವನ್ನು ವಿಧಿಸಲಾಗುತ್ತದೆ” ಎಂದು ಬಿಐಎಲ್ ಎಚ್ಚರಿಸಿದೆ.
ಹಳದಿ ಬೋರ್ಡ್ ಟ್ಯಾಕ್ಸಿಗಳು ಮತ್ತು ಎಲೆಕ್ಟ್ರಿಕ್ ಕ್ಯಾಬ್‌ಗಳು ಸೇರಿದಂತೆ ಎಲ್ಲಾ ವಾಣಿಜ್ಯ ವಾಹನಗಳು ಗೊತ್ತುಪಡಿಸಿದ ಪಾರ್ಕಿಂಗ್ ವಲಯಗಳಲ್ಲಿ ಮಾತ್ರ ಪ್ರಯಾಣಿಕರಿಗಾಗಿ ಕಾಯಬೇಕಾಗುತ್ತದೆ ಎಂದು ಬಿಐಎಎಲ್ ಹೇಳಿದೆ.
“ಸುಲಭವಾದ ಪಿಕ್-ಅಪ್ ಅನುಭವವನ್ನು ಒದಗಿಸಲು, ಹಳದಿ ಬೋರ್ಡ್ ವಾಹನಗಳಿಗೆ ಮೊದಲ 10 ನಿಮಿಷಗಳ ಪಾರ್ಕಿಂಗ್ ಉಚಿತವಾಗಿರುತ್ತದೆ. ಟರ್ಮಿನಲ್ 1 ಕ್ಕೆ ಆಗಮಿಸುವ ವಾಣಿಜ್ಯ ವಾಹನಗಳು P4 ಮತ್ತು P3 ಪಾರ್ಕಿಂಗ್ ವಲಯಗಳಿಗೆ ಹೋಗಬೇಕು. ಆದರೆ ಟರ್ಮಿನಲ್ 2 ಗೆ ಸೇವೆ ಆಗಮಿಸುವ ವಾಹನಗಳನ್ನು P2 ಪಾರ್ಕಿಂಗ್ ವಲಯಕ್ಕೆ ತೆರಳಬೇಕು” ಎಂದು ಬಿಐಎಲ್ ತಿಳಿಸಿದೆ.

ಇನ್ಮುಂದೆ ಕರ್ನಾಟಕದಲ್ಲಿ ಡಿಜಿಟಲ್ ಇ-ಸ್ಟ್ಯಾಂಪ್‌

TAGGED:New parking system for Bengaluru Airport; to be implemented from December 8
Share This Article
Facebook Twitter Copy Link Print
Previous Article ಇನ್ಮುಂದೆ ಕರ್ನಾಟಕದಲ್ಲಿ ಡಿಜಿಟಲ್ ಇ-ಸ್ಟ್ಯಾಂಪ್‌
Next Article ಮದುವೆ ಆಗಲು 2 ವರ್ಷ ಕಾಯಲ್ಲವೆಂದು 19 ವರ್ಷದ ಯುವಕ ಆತ್ಮಹತ್ಯೆ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?