Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು: ರಾಜ್ಯದ ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರ ತುಂಬಿ ತುಳುಕಾಡುತ್ತಿದ್ದು ಕರ್ನಾಟಕದಲ್ಲಿ ಶೇ. 63ರಷ್ಟು ಭ್ರಷ್ಟಾಚಾರ ಇದೆ ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಹೇಳಿದ್ದಾರೆ. ಕೇರಳದಲ್ಲಿ ಶೇ. 10ರಷ್ಟು ಮಾತ್ರವೇ ಭ್ರಷ್ಟಾಚಾರ ಇದೆ. ಆದರೆ ಕರ್ನಾಟಕದಲ್ಲಿ ಈ ಪಿಡುಗು ಹೆಚ್ಚಿದ್ದು, ಕೂಡಲೇ ಇದನ್ನು ತಡೆಯದಿದ್ದರೆ ಭವಿಷ್ಯದಲ್ಲಿ ಅಪಾಯ ಕಟ್ಟಿಟ್ಟಬುತ್ತಿ ಎಂದು ಅವರು ಹೇಳಿದ್ದಾರೆ.
ಹೌದು,ಕರ್ನಾಟಕದಲ್ಲಿ ಶೇ. 50% ಕ್ಕಿಂತ ಹೆಚ್ಚು ಭ್ರಷ್ಟಾಚಾರ ಇದೆ. ಆದರೆ ನೆರೆಯ ರಾಜ್ಯಗಳಲ್ಲಿ ಭ್ರಷ್ಟಾಚಾರ ತೀರ ಕಡಿಮೆ ಇದೆ ಎಂದು ಲೋಕಾಯುಕ್ತ ಹೇಳಿದೆ. ಇದನ್ನೇ ಇದೀಗ ವಿರೋಧ ಪಕ್ಷಗಳು ಅಸ್ತ್ರವನ್ನಾಗಿ ಮಾಡಿಕೊಂಡಿವೆ. ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಕ್ಕೆ ಮುಖ್ಯ ಕಾರಣಗಳಲ್ಲಿ ಈ ಹಿಂದೆ ಆಡಳಿತದಲ್ಲಿದ್ದ ಬಿಜೆಪಿಯು ಶೇ 40% ಭ್ರಷ್ಟಾಚಾರ / ಕಮಿಷನ್ ತೆಗೆದುಕೊಳ್ಳುತ್ತಿತ್ತು ಎನ್ನುವ ಗಂಭೀರ ಆರೋಪವೂ ಒಂದಾಗಿತ್ತು. ಆದರೆ ಕಾಂಗ್ರೆಸ್ ಸರ್ಕಾರವೇ ಮಿತಿ ಮೀರಿ ಭ್ರಷ್ಟಾಚಾರದಲ್ಲಿ ತೊಡಗಿದೆ ಎನ್ನುವ ಗಂಭೀರವಾದ ಆರೋಪ ಇದೀಗ ಕೇಳಿ ಬಂದಿದೆ.
ಕರ್ನಾಟಕದಲ್ಲಿ ಶೇ 63ರಷ್ಟು ಭ್ರಷ್ಟಾಚಾರ ಇದೆ. ಆದರೆ ಕೇರಳದಲ್ಲಿ ಶೇ 10ರಷ್ಟು ಮಾತ್ರವೇ ಭ್ರಷ್ಟಾಚಾರ ಇದೆ ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಹೇಳಿದ್ದಾರೆ. ನಾನು ಉಪ ಲೋಕಾಯುಕ್ತ ಆದ ಮೇಲೆ ಇದನ್ನೆಲ್ಲಾ ಕಣ್ಣಾರೆ ನೋಡುವ ಅವಕಾಶ ಸಿಕ್ಕಿದೆ ಎಂದು ಅವರು ಹೇಳಿದ್ದಾರೆ. ರಾಜ್ಯದ ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರ ತುಂಬಿ ತುಳುಕಾಡುತ್ತಿದೆ. ಕರ್ನಾಟಕ ಭ್ರಷ್ಟಾಚಾರದ ಅಗ್ರಪಟ್ಟಿಯಲ್ಲಿ ಐದನೆಯ ಸ್ಥಾನದಲ್ಲಿದೆ ಈ ಪಿಡುಗನ್ನು ಈಗಲೇ ತಡೆಯದಿದ್ದರೆ ಭವಿಷ್ಯದಲ್ಲಿ ಭೀಕರ ಅಪಾಯ ಆಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಹೈಕೋರ್ಟ್ ವಕೀಲರ ಸಭಾಂಗಣದಲ್ಲಿ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ್ದ ಉಪಲೋಕಾಯುಕ್ತರ ಈ ಹೇಳಿಕೆ ಬೆನ್ನಲ್ಲೇ ವಿಪಕ್ಷ ಬಿಜೆಪಿ, ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಮೇಲೆ ಮುಗಿಬಿದ್ದಿದೆ.
ಸಮಂತಾ ಮದುವೆ ಬೆನ್ನಲ್ಲೇ ಗುಡ್‌ನ್ಯೂಸ್ ಕೊಟ್ಟ ನಾಗ ಚೈತನ್ಯ-ಶೋಭಿತಾ ಜೋಡಿ