Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಡೆತ್ನೋಟ್ ಬರೆದಿಟ್ಟು ನಿರ್ಮಾಣ ಹಂತದ ಕಟ್ಟಡದಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ವೈಟ್ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ಮುರುಳಿ, ಶಶಿ ನಂಬಿಯಾರ್ ಮತ್ತು ಉಷಾ ನಂಬಿಯಾರ್ ಎಂಬುವವರಿಂದ 2018ರಲ್ಲಿ ಸೈಟ್ ಖರೀದಿಸಿದ್ದರು. ಆದರೆ ಕಟ್ಟಡ ನಿರ್ಮಾಣ ಮಾಡಲು ಬಿಡದೆ ತೊಂದರೆ ನೀಡುತ್ತಿದ್ದರು. ಅಲ್ಲದೆ 20 ಲಕ್ಷ ರೂ ಕೊಡುವಂತೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ.
ಕಾನೂನು ಬಾಹಿರವಾಗಿ ಕಟ್ಟಡ ನಿರ್ಮಾಣ ಮಾಡುತ್ತಿದ್ದಾರೆಂದು ಉಷಾ ನಂಬಿಯಾರ್ ದೂರು ಹಿನ್ನಲೆ ಗ್ರೇಟರ್ ಬೆಂಗಳೂರು ಅಥಾರಿಟಿಯಿಂದ ಮುರುಳಿಗೆ ನೋಟಿಸ್ ಬಂದಿತ್ತು. ಇದರಿಂದ ಬೇಸತ್ತ ಮುರಳಿ ಮನನೊಂದು ನಿರ್ಮಾಣ ಹಂತದ ಕಟ್ಟಡದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇನ್ನು ಸಾವಿಗೂ ಮುನ್ನ ಮುರಳಿ ಡೆತ್ನೋಟ್ ಬರೆದಿಟ್ಟಿದ್ದು, ತನಗೆ ಜಿಬಿಎಯಿಂದ ನೋಟಿಸ್ ಕೊಡಿಸಲು ಪಕ್ಕದ ಮನೆಯ ಉಷಾ ನಂಬಿಯಾರ್ ಕಾರಣವಾಗಿದ್ದಾರೆಂದು ಆರೋಪಿಸಿ ಅವರ ಹೆಸರು ಉಲ್ಲೇಖಿಸಿದ್ದಾರೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸಿದ್ದಾರೆ.