Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಹುಬ್ಬಳ್ಳಿ: ದೇಶದಾದ್ಯಂತ ಇಂಡಿಗೋ ವಿಮಾನ ಸಂಚಾರದಲ್ಲಿ ವ್ಯತ್ಯಯವಾಗಿದ್ದರ ಬಿಸಿ ನೂತನ ವಧು ವರರಿಗೂ ತಟ್ಟಿದೆ. ಹೌದು ವಿಮಾನ ಟೇಕಾಫ್ ಆಗದ ಕಾರಣ ಆನ್ಲೈನ್ ನಲ್ಲೇ ಆರತಕ್ಷತೆ ಸಮಾರಂಭದಲ್ಲಿ ಮದು ಮಕ್ಕಳು ಭಾಗಿಯಾಗಿದ್ದಾರೆ.
ಹುಬ್ಬಳ್ಳಿಯ ಗುಜರಾತ್ ಭವನದಲ್ಲಿ ಬುಧವಾರ ವಧು ಮೇಧಾ ಕ್ಷೀರಸಾಗರ ಹಾಗೂ ವರ ಸಂಗಮ ದಾಸ್ ಅವರ ಆರತಕ್ಷತೆ ಆಯೋಜಿಸಲಾಗಿತ್ತು. ನವೆಂಬರ್ 23ರಂದು ಭುವನೇಶ್ವರದಲ್ಲಿ ಮದುವೆಯಾದ ಈ ಜೋಡಿ, ಬೆಂಗಳೂರಿಗೆ ಆಗಮಿಸಿ ಅಲ್ಲಿಂದ ಹುಬ್ಬಳ್ಳಿಗೆ ಬರಲು ಡಿಸೆಂಬರ್ 2ರ ವಿಮಾನ ಬುಕ್ ಮಾಡಿದ್ದರು. ಕೆಲ ಸಂಬಂಧಿಕರು ಭುವನೇಶ್ವರ–ಮುಂಬೈ–ಹುಬ್ಬಳ್ಳಿ ಮಾರ್ಗದಲ್ಲಿ ವಿಮಾನ ಟಿಕೆಟ್ ಬುಕ್ ಮಾಡಿದ್ದರು.
ಆದರೆ ವಿಮಾನವಿಲ್ಲದೇ ವಧು-ವರರು ಬಾರದ ಕಾರಣ ಆನ್ಲೈನ್ ಲ್ಲಿಯೇ ಭಾಗವಹಿಸಿದ್ದಾರೆ. ವಧು -ವರರೇ ಇಲ್ಲದೆ ಆರತಕ್ಷತೆ ಸಮಾರಂಭದಲ್ಲಿ ಬಂಧು ಬಾಂಧವರು ಭಾಗಿಯಾಗಿದ್ದಾರೆ.